ETV Bharat / briefs

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಚೆಕ್​ ವಿತರಣೆ - ದಾವಣಗೆರೆ ಆಶಾ ಕಾರ್ಯಕರ್ತೆರು

ದಾವಣಗೆರೆಯಲ್ಲಿ ಕೋವಿಡ್ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆರಯರಿಗೆ ಸರ್ಕಾರದ ವತಿಯಿಂದ 3000 ರೂ. ಪ್ರೋತ್ಸಾಹಧನ ನೀಡಲಾಯಿತು.

Incentive distribution for asha activists

author img

By

Published : Jun 13, 2020, 12:42 AM IST

ದಾವಣಗೆರೆ: ಲಾಕ್​ಡೌನ್ ಸಮಯದಲ್ಲಿ ಆಶಾ ಕಾರ್ಯಕತೆಯರು ಜೀವ ಲೆಕ್ಕಿಸದೆ ಪ್ರತಿ ಮನೆ-ಮನೆಗೂ ತೆರಳಿ ಕೊರೊನಾ ಕುರಿತು ಜಾಗೃತಿ ಮೂಡಿಸಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಹೇಳಿದ್ದಾರೆ.

ಜಿಲ್ಲಾಡಳಿತ ಭವನದ ಸಂಭಾಗಣದಲ್ಲಿ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆ ಮತ್ತು ಜಿಲ್ಲೆಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 3000 ರೂ. ಪ್ರೋತ್ಸಾಹ ಧನ ನೀಡುವುದು ಮುಖ್ಯವಲ್ಲ. ಗೌರವ ಸಲ್ಲಿಸುವುದು ಮುಖ್ಯ. ರಾಜ್ಯದಲ್ಲಿ 42,000 ಕಾರ್ಯಕರ್ತೆಯರಿದ್ದು, ಸಿಎಂ ಸೂಚನೆ ಮೇರೆಗೆ ಜಿಲ್ಲಾಡಳಿತ ಮತ್ತು ಎಲ್ಲಾ ಸಹಕಾರ ಸಂಘಗಳ ಸಹಯೋಗದೊಂದಿಗೆ ಪ್ರತಿಯೊಬ್ಬ ಕಾರ್ಯಕರ್ತೆಗೆ ಪ್ರೋತ್ಸಾಹ ಧನ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಪ್ರೋತ್ಸಾಹ ಧನದ ಮೊತ್ತ ಕಡಿಮೆ ಇರಬಹುದು. ಆದರೆ ಅವರಿಗೆ ಸಲ್ಲಿಸುತ್ತಿರುವ ಗೌರವ ದೊಡ್ಡದು. ಆಶಾ ಕಾರ್ಯಕರ್ತೆಯರು ತುಂಬಾ ಶ್ರಮ ವಹಿಸಿ ಕೆಲಸ ನಿರ್ವಹಿಸಿದ್ದಾರೆ. ಅದನ್ನು ಗುರುತಿಸಿ ಗೌರವಿಸಲಾಗುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು, ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಸಿಎಂ ಪರಿಹಾರ ನಿಧಿಗೆ 52 ಕೋಟಿ ಹಣ:

ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿ, ಲಾಕ್‍ಡೌನ್ ಆದ ಸಮಯದಲ್ಲಿ ಸಹಕಾರ ಇಲಾಖೆ ವತಿಯಿಂದ ರೂ. 52 ಕೋಟಿ ರೂ. ಹಣ ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದೇವೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರ ಪ್ರಾಮಾಣಿಕ ಸೇವೆಗೆ ತಲಾ ರೂ. 3 ಸಾವಿರ ಪ್ರೋತ್ಸಾಹ ಧನವನ್ನು ಸಹಕಾರ ಇಲಾಖೆಯಿಂದ ನೀಡುವ ಮೂಲಕ ಗೌರವ ಸಲ್ಲಿಸಲಾಗುತ್ತಿದೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ಸಾಲ ಸೌಲಭ್ಯ:

ಆಶಾ ಕಾರ್ಯಕರ್ತೆಯರಿಗೆ ಅವರಿರುವ ಜಿಲ್ಲೆಯಲ್ಲಿಯೇ ಡಿಸಿಸಿ ಬ್ಯಾಂಕ್‍ನಿಂದ ಅತಿ ಕಡಿಮೆ ಬಡ್ಡಿಗೆ ಸಾಲ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಪ್ರೋತ್ಸಾಹ ಧನ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಸ್ತ್ರೀ ಶಕ್ತಿ ಸಂಘ ಹಾಗೂ ಸ್ವಸಹಾಯ ಸಂಘಗಳಿಗೆ ಸಹಕಾರ ಇಲಾಖೆಯಿಂದ ಹಲವು ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವೈದ್ಯರು ಮತ್ತು ನರ್ಸ್‍ಗಳಿಗೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಉತ್ತಮ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.

ಸಂಸದ ಜಿ. ಎಂ. ಸಿದ್ದೇಶ್ವರ್ ಮಾತನಾಡಿ, ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳಿದ್ದು ಅದರಲ್ಲಿ 165 ಮಂದಿ ಗುಣಮುಖರಾಗಿದ್ದಾರೆ. ಇನ್ನುಳಿದಂತೆ 49 ಕೇಸ್‍ಗಳು ಸಕ್ರಿಯವಾಗಿದೆ. ಜಿಲ್ಲಾಡಳಿತದಿಂದ ಚಿಗಟೇರಿ ಆಸ್ಪತ್ರೆಯಲ್ಲಿ ಕೋವಿಡ್-19 ಲ್ಯಾಬ್ ಉದ್ಘಾಟನೆಯಾಗಿದ್ದು, ಇದರಿಂದ ಇನ್ನೂ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.

ಕೊರೊನಾ ವಿರುದ್ದ ಹೋರಾಡಿದ ಸುಮಾರು 42ಸಾವಿರ ಆಶಾ ಕಾರ್ಯಕರ್ತೆಯರಿಗೆ 12.7 ಕೋಟಿ ರೂ. ಹಣವನ್ನು ಪ್ರೋತ್ಸಾಹಧನದ ರೂಪದಲ್ಲಿ ಮುಖ್ಯಮಂತ್ರಿಗಳು ನೀಡುತ್ತಿರುವುದು ಅಭಿನಂದನಾರ್ಹ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.