ETV Bharat / briefs

ಆಕ್ಸಿಜನೇಟೆಡ್ ಬೆಡ್​ಗಳ ಸಂಖ್ಯೆ ಏರಿಸಲು ಕ್ರಮ: ಎಸ್.ಟಿ. ಸೋಮಶೇಖರ್ - ಸಚಿವ ಎಸ್.ಟಿ.ಸೋಮಶೇಖರ್ ಸುದ್ದಿ

ಕೋವಿಡ್ 2ನೇ ಅಲೆಯು ಹೆಚ್ಚು ಅಪಾಯಕಾರಿಯಾದ್ದು, ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾವು-ನೋವುಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದಕ್ಕಾಗಿ ಆಕ್ಸಿಜನೇಟೆಡ್ ಬೆಡ್​ಗಳ ಸಂಖ್ಯೆ ಹೆಚ್ಚಳ ಸೇರಿದಂತೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​ ಟಿ ಸೋಮಶೇಖರ್​ ಹೇಳಿದ್ದಾರೆ.

ST Somashekar
ST Somashekar
author img

By

Published : May 11, 2021, 3:07 PM IST

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನೇಟೆಡ್ ಬೆಡ್​ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ನೀಡಿದರು.

ಹೆಚ್.ಡಿ.ಕೋಟೆ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಬೆಡ್​ಗಳನ್ನು ನೀಡಬೇಕು ಎಂದು ಈಗಾಗಲೇ ತಿಳಿಸಲಾಗಿದೆ. ಇದಕ್ಕಾಗಿ ನಿನ್ನೆ ಸುತ್ತೂರು ಸ್ವಾಮೀಜಿಗಳೊಂದಿಗೆ ಸಭೆ ನಡೆಸಲಾಗಿದ್ದು, ಅವರು ಸಹ 300 ಆಕ್ಸಿಜನೇಟೆಡ್ ಬೆಡ್ ಗಳನ್ನು ನೀಡಲು ಒಪ್ಪಿಗೆ ನೀಡಿದ್ದಾರೆ ಎಂದರು.

ಕೋವಿಡ್ 2ನೇ ಅಲೆಯು ಹೆಚ್ಚು ಅಪಾಯಕಾರಿಯಾದ್ದು, ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾವು-ನೋವುಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ಇದಕ್ಕಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಹೆಚ್.ಡಿ‌. ಕೋಟೆ ತಾಲೂಕಿನ ಪಿಡಿಒಗಳ ಮೇಲೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ವೈದ್ಯರಂತೆ ಇವರು ಪಿಪಿಪಿ ಕಿಟ್ ಧರಿಸಿ ಕೆಲಸ ಮಾಡುತ್ತಿಲ್ಲ. ಸರಿಯಾಗಿ ಅವರು ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಅನಿಲ್ ಚಿಕ್ಕಮಾದು ಅವರು ಮಾತನಾಡಿ, ಇಲ್ಲಿನ ಆಸ್ಪತ್ರೆಗಳಲ್ಲಿ ನುರಿತವಾದ ಪಿಜಿಷಿಯನಿಷ್ಟ್ ಇಲ್ಲ. ಈ ಬಗ್ಗೆ ಕೆ.ಡಿ.ಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಅವುಗಳಲ್ಲಿ ವೈದ್ಯರನ್ನು ನೇಮಿಸಿಲ್ಲ. ಪ್ರಸ್ತುತ 3 ಆ್ಯಂಬುಲೆನ್ಸ್ ಇದ್ದು, ಅವುಗಳು ದುರಸ್ತಿಯಲ್ಲಿದ್ದು, ಕೇವಲ ಒಂದು ಆ್ಯಂಬುಲೆನ್ಸ್ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಶೀಘ್ರವಾಗಿ ವೈದ್ಯರನ್ನು ಹಾಗೂ ನುರಿತ ಸಿಬ್ಬಂದಿಯನ್ನು ನೇಮಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಜನರಿಗೆ ಕೋವಿಡ್ ಬಗ್ಗೆ ಸ್ವತಃ ಅರಿವು ಬರಬೇಕು. ಮೊದಲ ಅಲೆಯಲ್ಲಿ ಕಡಿಮೆ ಕೋವಿಡ್ ಪ್ರಕರಣಗಳು ಬರುತ್ತಿದ್ದವು. ಆದರೆ 2 ನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಜನರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೇಳಿದರು.

ಸಭೆಗೂ ಮುನ್ನ ಹೆಚ್.ಡಿ.ಕೋಟೆ ತಾಲೂಕಿನ ಪ್ರಾಥಮಿಕ ಆಸ್ಪತ್ರೆಗೆ ಭೇಟಿ ನೀಡಿ ನೂತನವಾಗಿ ಸಿದ್ಧಗೊಂಡಿರುವ ಆಕ್ಸಿಜನೇಟೆಡ್ ಬೆಡ್​ಗಳನ್ನು ಸಚಿವರು ಉದ್ಘಾಟಿಸಿದರು.

ಹೆಚ್.ಡಿ.ಕೋಟೆ ತಾಲೂಕಿನ ಗಡಿಗಳನ್ನು ಮುಚ್ಚಲಾಗಿದ್ದು, ಹೊರಗಿನಿಂದ ಬರುವವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎ.ಎಂ. ಯೋಗೀಶ್​ ಸೇರಿದಂತೆ ‌ಇತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.