ETV Bharat / briefs

ಕೋವಿಡ್ ಕೇಂದ್ರವಾಗಿ ಐಟಿಐ ಆಸ್ಪತ್ರೆ ಪರಿವರ್ತನೆ: ಸದಾನಂದ ಗೌಡ - ಬೆಂಗಳೂರು

ಕೆ.ಆರ್. ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಐಟಿಐ ಆಸ್ಪತ್ರೆಯು ವಿಸ್ತಾರವಾದ ಸ್ಥಳಾವಕಾಶ ಹೊಂದಿದೆ. ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಸ್ಥಳೀಯ ಶಾಸಕರೂ ಆಗಿರುವ ಅವರು ಈ ಬಗ್ಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಆಕ್ಸಿಜಿನೇಟೆಡ್ ಹಾಸಿಗೆಗಳು, ತೀವ್ರ ನಿಗಾ ಘಟಕ ಸೇರಿದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಶುಶ್ರೂಷಾ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.

 ITI Hospital Transition as Covid Center: Sadananda Gowda

author img

By

Published : May 10, 2021, 8:55 PM IST

ಬೆಂಗಳೂರು: ಕೆ. ಆರ್. ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ (ಕೇಂದ್ರ) ಸ್ವಾಮ್ಯದ ಐಟಿಐ ಆಸ್ಪತ್ರೆಯನ್ನು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಪುನಶ್ಚೇತನಗೊಳಿಸಿ ತಾತ್ಕಾಲಿಕವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಈಗಾಗಲೇ ಸಂಬಂಧಪಟ್ಟ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದು ಅಗತ್ಯ ಸಹಕಾರ ದೊರೆಯುವ ವಿಶ್ವಾಸವಿದೆ. ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರುವ ಆಸ್ಪತ್ರೆಗಳು ಸಾಲುತ್ತಿಲ್ಲ. ಹೆಚ್ಚೆಚ್ಚು ತಾತ್ಕಾಲಿಕ ಕೋವಿಡ್ ಕೇಂದ್ರಗಳನ್ನು ಕಲ್ಪಿಸುವುದು ಅನಿವಾರ್ಯವಾಗಿದೆ. ಕೆ.ಆರ್ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಐಟಿಐ ಆಸ್ಪತ್ರೆಯು ವಿಸ್ತಾರವಾದ ಸ್ಥಳಾವಕಾಶ ಹೊಂದಿದೆ. ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಸ್ಥಳೀಯ ಶಾಸಕರೂ ಆಗಿರುವ ಅವರು ಈ ಬಗ್ಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಆಕ್ಸಿಜಿನೇಟೆಡ್ ಹಾಸಿಗೆಗಳು, ತೀವ್ರ ನಿಗಾ ಘಟಕ ಸೇರಿದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಶುಶ್ರೂಷಾ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಸ್ಯಾನಿಟೈಸೇಷನ್:

ಈ ಮಧ್ಯೆ ಸಚಿವರು ಇಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ವಾರ್ಡ್​​​ಗಳಲ್ಲಿ ರೋಗನಿರೋಧಕ ದ್ರಾವಣ ಸಿಂಪರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬಿಜೆಪಿ ಹೆಬ್ಬಾಳ ಮಂಡಲವು ಸದಾಸ್ಮಿತ ಪ್ರತಿಷ್ಠಾನ (ಡಿವಿಎಸ್ ಪೋಷಿತ) ಮತ್ತು ವೈಏಎನ್ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.

ಕೋವಿಡ್ ಕಿಟ್:

ಅದೇ ರೀತಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 20 ಸಾವಿರ ಕೋವಿಡ್ ಔಷಧ ಕಿಟ್​ಗಳನ್ನು ವಿತರಿಸುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು. ಇದರಲ್ಲಿ ಕೋವಿಡ್ ಚಿಕಿತ್ಸೆಗೆ ಬಳಸುವ ಸಾಮಾನ್ಯ ಮಾತ್ರೆಗಳು, ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಾಮಿನ್ ಮಾತ್ರಗಳು, ನಾಲ್ಕು ಎನ್ - 95 ಮಾಸ್ಕುಗಳು, ಸ್ಯಾನಿಟೈಸರ್’ಗಳು ಇರಲಿದ್ದು ಗೃಹ ಶುಶ್ರೂಷೆಯಲ್ಲಿ ಇರುವ ಕೋವಿಡ್ ಸೋಂಕಿತರು ಇದನ್ನು ಬಳಸಬಹುದಾಗಿದೆ ಎಂದು ಸದಾನಂದಗೌಡ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ 10 ಸಾವಿರ ಬಡವರಿಗೆ ಈ ಕೋವಿಡ್ ಕಿಟ್​ಗಳನ್ನು ವಿತರಿಸಲಾಗುವುದು. ಎರಡನೇ ಹಂತದಲ್ಲಿಯೂ 10 ಸಾವಿರ ಕಿಟ್​ಗಳನ್ನು ವಿತರಿಸಲಾಗುವುದು. ನಿಜಕ್ಕೂ ನೆರವಿನ ಅವಶ್ಯಕತೆ ಇರುವವರು ಇದರ ಲಾಭ ಪಡೆಯಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.