ಬೆಂಗಳೂರು: ಐಎಂಎ ಮಾಲೀಕ ಮನ್ಸೂರ್ ಖಾನ್ ವಿರುದ್ಧ ಜಯ ಕರ್ನಾಟಕ ಸಂಘಟನೆಯ ಕಾರ್ಯರ್ತರು ಪ್ರತಿಭಟನೆ ನಡೆಸಿದರು.
ನಗರದ ಆನಂದ್ ರಾವ್ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್, ಐಎಂಎ ಸಂಸ್ಥೆಯಿಂದ ಆಗಿರುವ ಮೋಸ ರಾಷ್ಟ್ರವೇ ಬೆಚ್ಚಿಬಿಳಿಸುವ ಸಂಗತಿ. ಇದರಲ್ಲಿ ರಾಜ್ಯ ಸರ್ಕಾರದಲ್ಲಿ ಇರುವ ಶಾಸಕರು, ಸಚಿವರು ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ. ಬಡವವರ ಮೇಲೆ ಇಲ್ಲ ಸಲ್ಲದ ಕೇಸ್ ಹಾಕಿಕೊಂಡು ಐಎಂಎ ಅಂತಹ ನಯವಂಚಕರ ಜೊತೆ ಶಾಮೀಲಾಗುವುದು ನಾಚಿಕೆಗೇಡಿನ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋಸ ಹೋದ ಎಲ್ಲಾರೂ ಒಟ್ಟಿಗೆ ಪ್ರತಿಭಟನೆ ಮಾಡೋಣ. ನಮಗೆ ಆಗಿರುವ ಅನ್ಯಾಯಕ್ಕೆ ಪರಿಹಾರ ಕಂಡುಕೊಳ್ಳೋಣ ಎಂದು ಕರೆ ನೀಡಿದರು.