ETV Bharat / briefs

ಸಭೆಯಲ್ಲಿ ಮನವೊಲಿಕೆ ಯತ್ನ ವಿಫಲ... ನಿರ್ಧಾರದಿಂದ ಹಿಂದೆ ಸರಿಯದ ವಿಶ್ವನಾಥ್! - undefined

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ಹೆಚ್.ವಿಶ್ವನಾಥ್ ಮನವೊಲಿಸಲು ಜೆಡಿಎಲ್​ಪಿ ಸಭೆಯಲ್ಲಿ ವರಿಷ್ಠರ ಅಂತಿಮ‌ ಕಸರತ್ತು. ವಿಶ್ವನಾಥ್ ಅವರು ನಿರ್ಧಾರದಿಂದ ಹಿಂದೆ ಸರಿದಿಲ್ಲ ಎನ್ನಲಾಗಿದೆ.

ಜೆಡಿಎಲ್​ಪಿ ಸಭೆ
author img

By

Published : Jun 4, 2019, 11:38 PM IST

Updated : Jun 4, 2019, 11:43 PM IST

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ಹೆಚ್.ವಿಶ್ವನಾಥ್ ಮನವೊಲಿಸಲು ವರಿಷ್ಠರು ಜೆಡಿಎಲ್​ಪಿ ಸಭೆಯಲ್ಲಿ ಅಂತಿಮ‌ ಕಸರತ್ತು ನಡೆಸಿದ್ದಾರೆ. ಜೆಪಿ‌ ನಗರದ ಸಿಎಂ ನಿವಾಸದಲ್ಲಿ ಇಂದು ಸಂಜೆ ಆರಂಭವಾದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು 3 ಗಂಟೆಗಳ ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಚರ್ಚೆ ಜೊತೆಗೆ ವಿಶ್ವನಾಥ್ ಅವರ ಮನವೊಲಿಸುವ ಯತ್ನವೂ ನಡೆದಿದೆ.

ಆದರೆ ವಿಶ್ವನಾಥ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ ಎನ್ನಲಾಗಿದೆ.‌ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ, ಹೆಚ್.ವಿಶ್ವನಾಥ್, ಸಚಿವರಾದ ಹೆಚ್.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪೂರ, ಡಿ.ಸಿ.ತಮ್ಮಣ್ಣ, ಶ್ರೀನಿವಾಸ್ (ವಾಸು), ವೆಂಕಟರಾವ್ ನಾಡಗೌಡ ಸೇರಿದಂತೆ ಇತರ ಸಚಿವರು, ಶಾಸಕರು, ಮೇಲ್ಮನೆ ಸದಸ್ಯರು ಹಾಜರಾಗಿದ್ದರು.

ವಿಶ್ವನಾಥ್ ಮನವೊಲಿಕೆಗೆ ವರಿಷ್ಠರ ಕಸರತ್ತು..

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ :

ಜೆಡಿಎಸ್ ಪಾಲಿನ ಉಳಿದ 3 ಸಚಿವ ಸ್ಥಾನ ಯಾರಿಗೆ ನೀಡಬೇಕೆಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಹೆಚ್. ವಿಶ್ವನಾಥ್ ಮತ್ತು ಸಚಿವ ಸಾ.ರಾ.ಮಹೇಶ್ ನಡುವಿನ ಅಸಮಾಧಾನ ಹಾಗೂ ಪಕ್ಷದ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ನಿಗಮ ಮಂಡಳಿಗಳ ನೇಮಕ ವಿಚಾರ, ಮುಖ್ಯಮಂತ್ರಿ ಕೈಗೊಳ್ಳಲಿರುವ ಗ್ರಾಮ ವಾಸ್ತವ್ಯ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚಿಸಿ ವರಿಷ್ಠರ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಿಕೊಂಡು ಮುನ್ನಡೆಸುವ ಬಗ್ಗೆ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಬಗ್ಗೆ ಶಾಸಕರೊಂದಿಗೆ ಚರ್ಚಿಸಲಾಗಿದೆ. ಅತಂತ್ರ ಫಲಿತಾಂಶ ಬಂದಿರುವ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇನ್ನು ಆಪರೇಷನ್ ಕಮಲಕ್ಕೆ ಶಾಸಕರು ಒಳಗಾಗದೆ ಒಗ್ಗಟ್ಟಿನಿಂದ ಇರಬೇಕು. ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗಬಾರದು. ಸರ್ಕಾರದಲ್ಲಿ ಸಾಧ್ಯವಿರುವ ಸೂಕ್ತ ಸ್ಥಾನಮಾನಗಳನ್ನು ಶಾಸಕರಿಗೆ ನೀಡಲಾಗುವುದು. ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕೆಲವು ಸಚಿವ ಸ್ಥಾನಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಬೇಕಾದ ಅನಿವಾರ್ಯತೆಯನ್ನು ಸಿಎಂ ಕುಮಾರಸ್ವಾಮಿ ಶಾಸಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಗತ್ಯಬಿದ್ದರೆ ಹಾಲಿ ಶಾಸಕರು ಕೂಡ ಸಚಿವ ಸ್ಥಾನ ಬಿಟ್ಟು ಕೊಡಲು ಸಿದ್ಧವಾಗಿರಬೇಕು ಎಂದು ಸಭೆಯಲ್ಲಿ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶಾಸಕರ ಅಭಿಪ್ರಾಯ ಪಡೆದು ಸರ್ಕಾರವನ್ನು ಮುನ್ನಡೆಸುವ ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಬಗ್ಗೆ ಕಾರ್ಯತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.

Intro:ಬೆಂಗಳೂರು : ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ಹೆಚ್. ವಿಶ್ವನಾಥ್ ಅವರ ಮನವೊಲಿಸಲು ವರಿಷ್ಠರು ಜೆಡಿಎಲ್ ಪಿ ಸಭೆಯಲ್ಲಿ ಅಂತಿಮ‌ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ.Body:ಜೆಪಿ‌ನಗರದ ಸಿಎಂ ನಿವಾಸದಲ್ಲಿ ಇಂದು ಸಂಜೆ ಆರಂಭವಾದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಚರ್ಚೆ ಜೊತೆಗೆ ವಿಶ್ವನಾಥ್ ಅವರ ಮನವೊಲಿಸುವ ಯತ್ನವೂ ನಡೆದಿದೆ. ಆದರೆ ವಿಶ್ವನಾಥ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ ಎನ್ನಲಾಗಿದೆ.‌
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ, ಹೆಚ್.ವಿಶ್ವನಾಥ್, ಸಚಿವರಾದ ಹೆಚ್.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪೂರ, ಡಿ.ಸಿ.ತಮ್ಮಣ್ಣ, ಶ್ರೀನಿವಾಸ್ (ವಾಸು), ವೆಂಕಟರಾವ್ ನಾಡಗೌಡ ಸೇರಿದಂತೆ ಇತರ ಸಚಿವರು, ಶಾಸಕರು, ಮೇಲ್ಮನೆ ಸದಸ್ಯರು ಹಾಜರಾಗಿದ್ದರು.
ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆದಿದೆ. ಜೆಡಿಎಸ್ ಪಾಲಿನ ಉಳಿದ ಮೂರು ಸಚಿವ ಸ್ಥಾನ ಯಾರ್ಯಾರಿಗೆ ನೀಡಬೇಕೆಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅದೇ ರೀತಿ ಹೆಚ್. ವಿಶ್ವನಾಥ್ ಮತ್ತು ಸಚಿವ ಸಾ.ರಾ.ಮಹೇಶ್ ನಡುವಿನ ಅಸಮಾಧಾನ ಹಾಗೂ ಪಕ್ಷದ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ನಿಗಮ-ಮಂಡಳಿಗಳ ನೇಮಕದ ವಿಚಾರ, ಮುಖ್ಯಮಂತ್ರಿ ಕೈಗೊಳ್ಳಲಿರುವ ಗ್ರಾಮ ವಾಸ್ತವ್ಯ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚಿಸಿ ವರಿಷ್ಠರು ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಿಕೊಂಡು ಮುನ್ನಡೆಸುವ ಬಗ್ಗೆ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಬಗ್ಗೆ ಶಾಸಕರೊಂದಿಗೆ ಚರ್ಚಿಸಿದ್ದು, ಅತಂತ್ರ ಫಲಿತಾಂಶ ಬಂದಿರುವ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಇನ್ನು ಆಪರೇಷನ್ ಕಮಲಕ್ಕೆ ಶಾಸಕರು ಒಳಗಾಗದೆ ಒಗ್ಗಟ್ಟಿನಿಂದ ಇರಬೇಕು. ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗಬಾರದು. ಸರ್ಕಾರದಲ್ಲಿ ಸಾಧ್ಯವಿರುವ ಸೂಕ್ತ ಸ್ಥಾನಮಾನಗಳನ್ನು ಶಾಸಕರಿಗೆ ನೀಡಲಾಗುವುದು. ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕೆಲವು ಸಚಿವ ಸ್ಥಾನಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಬೇಕಾದ ಅನಿವಾರ್ಯತೆಯನ್ನು ಸಿಎಂ ಕುಮಾರಸ್ವಾಮಿ ಶಾಸಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಹಾಲಿ ಶಾಸಕರು ಕೂಡ ಸಚಿವ ಸ್ಥಾನ ಬಿಟ್ಟುಕೊಡಬೇಕಾದ ಅಗತ್ಯಬಿದ್ದರೆ ಸಿದ್ಧವಾಗಿರಬೇಕು ಎಂಬುದು ಸಭೆಯಲ್ಲಿ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಶಾಸಕರ ಅಭಿಪ್ರಾಯ ಪಡೆದು ಸರ್ಕಾರವನ್ನು ಮುನ್ನಡೆಸುವ ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಬಗ್ಗೆ ಕಾರ್ಯತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.Conclusion:
Last Updated : Jun 4, 2019, 11:43 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.