ಕಡಬ(ದ.ಕ): ಹದಿನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಕಲೇಶಪುರ ನಿವಾಸಿ ಶೇಖರ್ ಯಾನೆ ಶೇಷಪ್ಪ ಕಂಡಿಗ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬ ತಾಲೂಕಿನ ಆತೂರು ಸಮೀಪದ 14ರ ಹರೆಯದ ತನ್ನ ಸಂಬಂಧಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ.
ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದು ಬಂದಿತ್ತು. ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಇದೀಗ ಆರೋಪಿಯನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.