ETV Bharat / briefs

ಭೀಕರ ರಸ್ತೆ ಅಪಘಾತ: ವಿಭಜಕಕ್ಕೆ ಕಾರು ಡಿಕ್ಕಿ, ಐವರ ದುರ್ಮರಣ - ರಸ್ತೆ ವಿಭಜಕ

ಬೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೆಟಿಕುರ್ಕಿ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ದುರ್ಮರಣ
author img

By

Published : May 1, 2019, 8:48 PM IST

ಚಿತ್ರದುರ್ಗ: ಲಾರಿಯನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೆಟಿಕುರ್ಕಿ ಬಳಿ ಸಂಭವಿಸಿದೆ.

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರನ್ನು ಸುಶ್ಮಿತಾ (12), ತಾಯಮ್ಮ (50), ಲತಾ (26), ವೀಣಿಕಾ (3), ಜಾಹ್ನವಿ (3) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕ ಪ್ರಕಾಶ್​ಗೆ ಗಂಭೀರ ಗಾಯಗಳಾಗಿದ್ದು, ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ದಾರುಣ ಘಟನೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

Intro:ಲಾರಿ ತಪ್ಪಿಸಲು ಹೋಗಿ ರಸ್ತೆ ವಿಭಾಜಕಕ್ಕೆ ಕಾರು ಡಿಕ್ಕಿ ಐವರ ದುರ್ಮರಣ

ಚಿತ್ರದುರ್ಗ:- ಲಾರಿ ತಪ್ಪಿಸಲು ಹೋಗಿ ರಸ್ತೆ ವಿಭಾಜಕಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೆಟಿಕುರ್ಕಿ ಬಳಿ ನಡೆದಿದೆ. ಬೆಂಗಳೂರು ಪೂನಾ ರಾಷ್ಟ್ರೀಯ ಹೆದ್ದಾರಿ 04 ರಲ್ಲಿ ಘಟನೆ ನಡೆದಿದ್ದು, ಗಾಯಳುಗಳು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಂದೇ ಕುಟುಂಬದ ಐವರು ದುರ್ಮಣವಾಗಿದ್ದು, ಸುಶ್ಮಿತಾ (12) ತಾಯಮ್ಮ (50)ಲತಾ (26), ವೀಣಿಕಾ (03), ಜಾಹ್ನವಿ (03) ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಕಾರು ಚಾಲಕ
ಪ್ರಕಾಶ್ ಗೆ ಗಂಭೀರ ಗಾಯಗಳಾಗಿದ್ದು, ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವನಪ್ಪಿದ್ದವರು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುವಾಗ ದಾರುಣ ಘಟನೆ ನಡೆದಿದೆ. ಮಾಹಿತಿ ತಿಳಿದ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯ ಪೋಲಿಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ.

Body:accidentConclusion:5 death
ETV Bharat Logo

Copyright © 2025 Ushodaya Enterprises Pvt. Ltd., All Rights Reserved.