ETV Bharat / briefs

ಮುಂಗಾರು ಆರಂಭಕ್ಕೂ ಮುನ್ನ ಮುನ್ನೆಚ್ಚರಿಕೆ ವಹಿಸಿ: ಕೊಡಗು ಡಿಸಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ.

Kodagu DC
Kodagu DC
author img

By

Published : May 20, 2021, 8:40 AM IST

ಕೊಡಗು: ಜೂನ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಈ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತಾಲೂಕುವಾರು ಪ್ರತ್ಯೇಕವಾಗಿ ಸಭೆ ನಡೆಸಿದ ಜಿಲ್ಲಾಧಿಕಾರಿ, ಬುಧವಾರ ಸೋಮವಾರಪೇಟೆ ತಾಲೂಕಿಗೆ ಸಂಬಂಧಪಟ್ಟಂತೆ ಸಭೆ ನಡೆಸಿ ಮಾಹಿತಿ ಪಡೆದರು.

ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ಮುಂಚಿತವಾಗಿ ಲಿಖಿತವಾಗಿ ಕುಟುಂಬಗಳಿಗೆ ಮಾಹಿತಿ ನೀಡಬೇಕು. ಕಂದಾಯ ಪೊಲೀಸ್, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಲೋಕೋಪಯೋಗಿ ಹೀಗೆ ಹಲವು ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮಳೆ ಹಾನಿ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತೆ ಅವರು ತಿಳಿಸಿದರು.

ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸುವುದು. ಸೂಕ್ಷ್ಮ ಪ್ರದೇಶಗಳಿಗೆ ಎನ್‍ಡಿಆರ್‌ಎಫ್ ತಂಡ ಭೇಟಿ ನೀಡುವುದು, ಪರಿಹಾರ ಕೇಂದ್ರ ಅಗತ್ಯವಿದ್ದಲ್ಲಿ ತೆರೆಯುವುದು, ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ರಸ್ತೆ, ಸೇತುವೆ, ಮನೆ ಹಾನಿ ಬಗ್ಗೆ ಛಾಯಚಿತ್ರ ಸಹಿತ ತಕ್ಷಣವೇ ಮಾಹಿತಿ ನೀಡುವುದು. ಹಾಗೆಯೇ ಬರೆ ಕುಸಿತ ಉಂಟಾದಲ್ಲಿ ಹಾಗೂ ರಸ್ತೆ ಅಥವಾ ವಿದ್ಯುತ್ ಕಂಬಕ್ಕೆ ಮರ ಬಿದ್ದಲ್ಲಿ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.

ತಹಶೀಲ್ದಾರ್ ಗೋವಿಂದರಾಜು ಅವರು ಮಾಹಿತಿ ನೀಡಿ, ಮುಂಗಾರು ಸಂಬಂಧ ಸೋಮವಾರಪೇಟೆ ತಾಲ್ಲೂಕಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳ 775 ಕುಟುಂಬಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಕುಶಾಲನಗರ, ನೆಲ್ಯಹುದಿಕೇರಿ, ಮಾದಾಪುರ, ಗರ್ವಾಲೆ, ಸೂರ್ಲಬಿ ಮತ್ತಿತ್ತರ ಕಡೆಯಲ್ಲಿ ಪ್ರವಾಹ ಉಂಟಾಗಲಿದ್ದು, ಈ ಪ್ರದೇಶದಲ್ಲಿನ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಪರಿಹಾರ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವುದರಿಂದ ಸೀಮೆಎಣ್ಣೆ ಪೂರೈಸಬೇಕಿದೆ ಎಂದು ತಹಶೀಲ್ದಾರ್ ಗೋವಿಂದ ರಾಜು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.