ಗಂಗಾವತಿ : ತಾಲೂಕಿನ ಕನಕಗಿರಿ ಕ್ಷೇತ್ರದಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಕೈಗೊಂಡಿದ್ದ ಪ್ರವಾಹ ಪರಿಹಾರ ಕಾಮಗಾರಿಗಳಲ್ಲಿ ಸರ್ಕಾರಕ್ಕೆ ವಂಚನೆ ಮಾಡಿದ ಇಬ್ಬರು ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ.
ಇಲ್ಲಿನ ಉಪವಿಭಾಗ ಕಚೇರಿಯ ಈ ಹಿಂದಿನ ಪ್ರಭಾರ ಸಹಾಯಕ ಕಾರ್ಯಪಾಲಕ ಎಂಜಿನೀಯರ್ ಎಸ್ ಡಿ ನಾಗೋಡ ಹಾಗೂ ಕಿರಿಯ ಎಂಜಿನಿಯರ್ ಡಿ ಎಂ ರವಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಘುನಂದನ್ ಮೂರ್ತಿ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಡಿ ಮೋಹನ್ ಅವರಿಗೆ ನಿರ್ದೇಶನ ನೀಡಿರುವ ಸಿಇಒ, ಅಧಿಕಾರಿಗಳ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ವರದಿಯನ್ನು ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.