ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಕ್ಷೇತ್ರದ ಶಾಸಕ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಅವರ ತಾಯಿ ಕೊರೊನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ
ಶಾಂತಮ್ಮ ಪಾಂಡಪ್ಪಾ ಲಮಾಣಿ (75) ಮೃತರು.
ಕೊರೊನ ಸೋಂಕು ತಗುಲಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶಾಂತಮ್ಮ ಅವರನ್ನು ಕಳೆದ ಒಂದು ವಾರದ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಮೃತಪಟ್ಟರು.