ETV Bharat / briefs

ಬರ, ಉದ್ಯೋಗ, ಕುಡಿವ ನೀರಿಗೆ 3600 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧ: ಕೃಷ್ಣಬೈರೇಗೌಡ - ಉದ್ಯೋಗ

ಸಚಿವ ಸಂಪುಟ ಸಭೆಯಲ್ಲಿ ಬರ, ನಿರುದ್ಯೋಗ, ಕುಡಿಯುವ ನೀರಿಗೆ ಸಂಬಂಧಿಸಿದಂತೆ 3600 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಕೃಷ್ಣ ಬೈರೇಗೌಡ
author img

By

Published : May 9, 2019, 9:42 PM IST

ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಖಾತ್ರಿ, ರಾಸುಗಳಿಗೆ ಮೇವು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಸಂಪುಟ ಸಭೆ ಬಳಿಕ ಮಾಧ್ಯಮದವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಬರ ಘೋಷಣೆಯಾದ ತಾಲೂಕಿಗೆ 2 ಕೋಟಿ ನೀಡಲಾಗಿದೆ. ಖಾಸಗಿ ಬೋರ್​ವೆಲ್ ಬಾಡಿಗೆ ಪಡೆಯಲು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಹಣದ ಕೊರತೆ ಇಲ್ಲ. ವಿಧಾನಸಭೆ ಉಪಚುನಾವಣೆ ನಡೆಯುವ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಬರ ಪರಿಹಾರ ಪರಿಶೀಲನಾ ಸಭೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಲಾಗಿದೆ. ಒಟ್ಟಾರೆ 3600 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಒಂದು ವಾರದೊಳಗೆ ಬರ ಪರಿಸ್ಥಿತಿ ಕುರಿತಂತೆ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಬರಪೀಡಿತ ಪ್ರದೇಶಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೇ 15ರಂದು ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾಗೋಷ್ಠಿ

ಕುಡಿಯುವ ನೀರಿನ ಸಮಸ್ಯೆ ಇರುವಲ್ಲಿ ಎರಡು ದಿನದೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು. ತಾಲೂಕು ಮಟ್ಟದ ಅಧಿಕಾರಿಗಳೇ ಟ್ಯಾಂಕರ್​ ನೀರಿಗೆ ಅನುಮತಿ ನೀಡಲಿದ್ದಾರೆ. ಕಂದಾಯ ಇಲಾಖೆಯಿಂದ ಕುಡಿಯುವ ನೀರಿಗಾಗಿ 324 ಕೋಟಿ ರೂ. ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 201 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದ 2575 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 1324 ಗ್ರಾಮಗಳಿಗೆ 2177 ಟ್ಯಾಂಕರ್​​ಗಳ ಮೂಲಕ ನೀರು ಪೂರೈಸಲಾಗುತ್ತದೆ. 1647 ಖಾಸಗಿ ಬೋರ್​ವೆಲ್​ಗಳನ್ನು ಬಾಡಿಗೆಗೆ ಪಡೆದು 1251 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ ಎಂದರು.

ಹೆಚ್ಚುವರಿಯಾಗಿ ಕುಡಿಯುವ ನೀರಿಗೆ 201 ಕೋಟಿ ರೂ. ನೀಡಲಾಗಿದೆ. ಜಾನುವಾರುಗಳಿಗಾಗಿ 150 ಮೇವಿನ ಬ್ಯಾಂಕ್ ತೆರೆಯಲಾಗಿದ್ದು, ಪ್ರತಿ ಕೆಜಿಗೆ 2 ರೂ.ನಂತೆ ಮೇವುವನ್ನು ರೈತರಿಗೆ ವಿತರಿಸಲಾಗುತ್ತಿದೆ. ರಾಜ್ಯದಲ್ಲಿ 12 ಗೋಶಾಲೆಗಳನ್ನು ತೆರೆಯಲಾಗಿದ್ದು. 11,614 ಜಾನುವಾರುಗಳಿಗೆ ಸಹಾಯವಾಗುತ್ತಿದೆ. ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾರ್ಚ್ ಅಂತ್ಯದವರೆಗೆ 10.47 ಕೋಟಿ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದಿಂದ 1697 ಕೋಟಿ ರೂ. ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಬರಬೇಕು. ಈಗಾಗಲೇ ಆಗಿರುವ ಕಾಮಗಾರಿಗಳಿಗೂ ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ. 15 ದಿನದೊಳಗಾಗಿ ಹಣ ಪಾವತಿಸಬೇಕೆಂಬ ಕಾಯ್ದೆ ಇದ್ದರೂ ನಾಲ್ಕು ತಿಂಗಳಿನಿಂದ ಹಣ ಬಿಡುಗಡೆ ಮಾಡಿಲ್ಲ.

ಎಸ್​ಡಿಆರ್​ಎಫ್​ನಿಂದಲೂ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿತ್ತು. ಕೇಂದ್ರ ಬರ ಪರಿಶೀಲನಾ ತಂಡ ಕೂಡ ವರದಿ ನೀಡಿದೆ. ಆದರೆ, ಕೇಂದ್ರದಿಂದ ನಿರೀಕ್ಷಿತ ಅನುದಾನ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂಗಾರು ಹಂಗಾಮಿನ ಬರ ಪರಿಹಾರದ ನೆರವಾಗಿ ಕೇಂದ್ರ ಸರ್ಕಾರ 949 ಕೋಟಿ ರೂ. ಮಂಜೂರು ಮಾಡಿದ್ದು, 439 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ನೆರೆಯ ಮಹಾರಾಷ್ಟ್ರಕ್ಕೆ 4700 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿಯಿತು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

Intro:ಬೆಂಗಳೂರು : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಖಾತ್ರಿ, ರಾಸುಗಳಿಗೆ ಮೇವು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. Body:ಸಂಪುಟ ಸಭೆ ಬಳಿಕ ಈ ವಿಷಯ ತಿಳಿಸಿದ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡರು, ಕುಡಿಯುವ ನೀರಿನ ಅಭಾವ ನೀಗಿಸಲು ಖಾಸಗಿ ಬೋರ್ವೆಲ್ ಬಾಡಿಗೆ ಪಡೆಯಲು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಸಭೆ ಉಪಚುನಾವಣೆ ನಡೆಯುವ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಬರ ಪರಿಹಾರ ಪರಿಶೀಲನಾ ಸಭೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಒಂದು ವಾರದೊಳಗೆ ಬರ ಪರಿಸ್ಥಿತಿ ಕುರಿತಂತೆ ಆಯಾ ಜಿಲ್ಲೆಯಲ್ಲಿ ಪರಿಶೀಲನಾ ಸಭೆಗಳನ್ನು ನಡೆಸಲು ಸೂಚಿಸಲಾಗಿದ್ದು, ಬರಪೀಡಿತ ಪ್ರದೇಶಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೇ 15 ರಂದು ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಇಂದಿನ ಸಂಪುಟ ಸಭೆಯಲ್ಲಿ ಬರ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಕುಡಿಯುವ ನೀರಿನ ತೊಂದರೆ ಕಂಡು ಬಂದ ಎರಡು ದಿನದೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು. ಟ್ಯಾಂಕರ್ಗಳಿಗೆ ಜಿಲ್ಲಾಧಿಕಾರಿಗಳು ನೀಡಬೇಕಾಗಿದ್ದ ಅನುಮತಿಯ ಅಧಿಕಾರವನ್ನು ಈಗ ತಾಲೂಕು ಮಟ್ಟದ ಅಧಿಕಾರಿಗಳಿಗೆ ನೀಡಲಾಗಿದೆ. ತಹಶೀಲ್ದಾರ್ ಅವರೇ ಟ್ಯಾಂಕರ್ ಮೂಲಕ ನೀರು ಪೂರೈಸಲು ಅನುಮತಿ ನೀಡಬಹುದಾಗಿದೆ ಎಂದರು. ಕಂದಾಯ ಇಲಾಖೆಯಿಂದ ಕುಡಿಯುವ ನೀರಿಗಾಗಿ 324 ಕೋಟಿ ರೂ. ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಿಂದ 201 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದ 2575 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 1324 ಗ್ರಾಮಗಳಿಗೆ 2177 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತದೆ. 1647 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು 1251 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆಯ ವಾರ್ಷಿಕ 2600 ಕೋಟಿ ರೂ. ಕುಡಿಯುವ ನೀರಿನ ಯೋಜನಾ ವೆಚ್ಚವನ್ನು ಹೊರತುಪಡಿಸಿ ಹೆಚ್ಚುವರಿಯಾಗಿ 201 ಕೋಟಿ ರೂ. ನೀಡಲಾಗಿದೆ. ಕಳೆದ ವರ್ಷ 2800 ಕೋಟಿ ರೂ. ಕುಡಿಯುವ ನೀರಿಗಾಗಿ ವೆಚ್ಚ ಮಾಡಲಾಗಿತ್ತು. ಈ ವರ್ಷ 3600 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.
ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಸಡಿಸಲಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ತುರ್ತು ಕುಡಿಯುವ ನೀರಿಗಾಗಿ 727 ಕೋಟಿ ರೂ. ಹಣವಿದೆ. ಜಾನುವಾರುಗಳಿಗಾಗಿ 150 ಮೇವಿನ ಬ್ಯಾಂಕ್ ತೆರೆಯಲಾಗಿದ್ದು, ಪ್ರತಿ ಕೆಜಿಗೆ 2 ರೂ.ನಂತೆ ಮೇವು ಅನ್ನು ರೈತರಿಗೆ ವಿತರಿಸಲಾಗುತ್ತಿದೆ. ರಾಜ್ಯದಲ್ಲಿ 12 ಗೋಶಾಲೆಗಳನ್ನು ತೆರೆಯಲಾಗಿದ್ದು, 11,614 ಜಾನುವಾರುಗಳಿಗೆ ಸಹಾಯವಾಗುತ್ತಿದೆ. ಅಲ್ಲದೆ, 16,080 ಮೇವಿನ ಕಿಟ್ಗಳನ್ನು ನೀಡಲಾಗಿದ್ದು, ಇದರಿಂದ ಮೇವು ಉತ್ಪಾದನೆಗೆ ಸಹಕಾರಿಯಾಗಿದೆ ಎಂದು ವಿವರಿಸಿದರು.
ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾರ್ಚ್ ಅಂತ್ಯದವರೆಗೂ 8.5 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ ಇತ್ತು. ಆದರೆ 10.47 ಕೋಟಿ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಇದೊಂದು ದಾಖಲೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಈಗಾಗಲೇ 74 ಲಕ್ಷ ಮಾನವ ದಿನಗಳನ್ನು ಈ ವರ್ಷದ ಮೇವರೆಗೆ ಸೃಷ್ಟಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ 1697 ಕೋಟಿ ರೂ. ಉದ್ಯೋಗ ಖಾತ್ರಿಯ ಯೋಜನೆಯಡಿ ಹಣ ಬರಬೇಕು. ಈಗಾಗಲೇ ಆಗಿರುವ ಕಾಮಗಾರಿಗಳಿಗೂ ಕೇಂದ್ರ ಹಣ ಬಿಡುಗಡೆ ಮಾಡಿಲ್ಲ. 15 ದಿನದೊಳಗಾಗಿ ಹಣ ಪಾವತಿಸಬೇಕೆಂಬ ಕಾಯ್ದೆ ಇದ್ದರೂ, ಕಳೆದ ಮೂರ್ನಾಲ್ಕು ತಿಂಗಳಿನಿಂದ ಹಣ ಬಿಡುಗಡೆ ಮಾಡಿಲ್ಲ.
ರಾಜ್ಯ ಸರ್ಕಾರದಿಂದಲೇ ಹಣ ಬಿಡುಗಡೆ ಮಾಡಲಾಗಿದೆ. ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ 949 ಕೋಟಿ ಬಿಡುಗಡೆ ಆಗಿದೆ. ಮಹಾರಷ್ಟ್ರಕ್ಕೆ 4700 ಕೋಟಿ ಬಿಡುಗಡೆ ಮಾಡಲಾಗಿದೆ. ಇದರ ಬಗ್ಗೆ ಸಂಪುಟ ಸಭೆಯಲ್ಲಿ ಬೇಸರ ವ್ಯಕ್ತವಾಗಿದೆ. ಮುಂಗಾರು ಹಂಗಾಮಿನಿಂದ 11 ಸಾವಿರ ಕೋಟಿ ನಷ್ಟ, 2000 ಕೋಟಿ ಅನುದಾನ ನೀಡಬೇಕು. ಎಸ್ ಡಿಆರ್ ಎಫ್ ನಿಂದಲೂ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿತ್ತು. ಕೇಂದ್ರ ಬರ ಪರಿಶೀಲನೆ ತಂಡ ಕೂಡ ವರದಿ ನೀಡಿದೆ. ಆದರೆ ಕೇಂದ್ರದಿಂದ ನಿರೀಕ್ಷಿತ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿಯವರು ಕೇಂದ್ರದ ಮೇಲೆ ಪ್ರಭಾವ ಬೀರುವ ಕೆಲಸ ಮಾಡದೇ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಕೂಲಿ ಹಣವನ್ನು ಫಲಾನುಭವಿಗಳಿಗೆ ಪಾವತಿಸಲು ಕ್ರಮ ಕೈಗೊಂಡಿದ್ದರೂ,ರಾಜ್ಯಸರ್ಕಾರಕ್ಕೂ ಕೇಂದ್ರದಿಂದ ನರೇಗಾ ಹಣ ಪಾವತಿಯಾಗುತ್ತಿಲ್ಲ ಎಂದು ಹೇಳಿದರು.
ಮುಂಗಾರು ಹಂಗಾಮಿನ ಬರ ಪರಿಹಾರದ ನೆರವನ್ನು ಕೇಂದ್ರ ಸರ್ಕಾರ 949 ಕೋಟಿ ರೂ. ಮಂಜೂರು ಮಾಡಿದ್ದು, 439 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಆದರೆ ನೆರೆಯ ಮಹಾರಾಷ್ಟ್ರಕ್ಕೆ 4700 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಈ ಬಗ್ಗೆ ಸಂಪುಟ ಸಭೆ ತೀವ್ರ ಬೇಸರವನ್ನು ವ್ಯಕ್ತಪಡಿಸಿತ್ತು ಎಂದರು.
ಹಿಂಗಾರು ಹಂಗಾಮಿನಲ್ಲಿ ನಿಯಮಗಳ ಪ್ರಕಾರ 1064 ಕೋಟಿ ರೂ. ಬರ ಪರಿಹಾರಕ್ಕೆ ಮನವಿ ಮಾಡಲಾಗಿತ್ತು ಆದರೂ ಇದುವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಪರಿಹಾರ ಮಂಜೂರಾಗಿಲ್ಲ. ಆದರೂ ಪ್ರತಿಪಕ್ಷ ರಾಜಕೀಯಕ್ಕಾಗಿ ಬರದ ವಿಚಾರವನ್ನು ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಬಿಬಿಎಂಪಿ ಬಜೆಟ್ ಕುರಿತು ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಆದರೆ, ಬಿಬಿಎಂಪಿಯಲ್ಲಿ ಎಸ್ ಸಿಪಿಟಿಎಸ್ ಪಿ ಕ್ರಿಯಾ ಯೋಜನೆ ಬಗ್ಗೆ ಚರ್ಚೆಯಾಗಿದೆ. ಇದಕ್ಕೆ 560 ಕೋಟಿ ರೂ. ಅನುಮೋದನೆ ನೀಡಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.