ಮೈಸೂರು: ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಲಕ್ಷ್ಮಿಕಾಂತ್ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಸದ್ಯ ಧಾರ್ಮಿಕ ದತ್ತಿನಿಧಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಜಟಾಪಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾಜಿ ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ.
ಇಂದು ನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಲಕ್ಷ್ಮಿಕಾಂತ್ ರೆಡ್ಡಿ ಅವರು ನಿರ್ಗಮಿತ ಆಯುಕ್ತೆ ಶಿಲ್ಪನಾಗ್ ಅವರಿಂದ ಅಧಿಕಾರ ಸ್ವೀಕರಿಸಿದರು.‘