ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಕೊಳವೆ ಬಾವಿಯಲ್ಲಿ ನೀರು ಬತ್ತಿದ್ದರಿಂದ ಬೇಸತ್ತ ತಿಪ್ಪೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.