ಕೊಪ್ಪಳ : ಕೊರೊನಾ ನಿಯಂತ್ರಿಸಲು ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಕಾಲ ಸಂಪೂರ್ಣ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಅಧಿಕೃತವಾಗಿ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್, ಮೇ 24ರಿಂದ ಮೇ 30ರವರೆಗೆ ಸಂಪೂರ್ಣ ಲಾಕ್ಡೌನ್ ಮುಂದುವರೆಯಲಿದೆ.
ಜಿಲ್ಲೆಯಲ್ಲಿ ಜಾರಿ ಮಾಡಲಾಗಿದ್ದ ಐದು ದಿನಗಳ ಸಂಪೂರ್ಣ ಲಾಕ್ಡೌನ್ ಇಂದಿಗೆ ಮುಗಿಯಲಿದ್ದು, ಮೇ 22 ಮತ್ತು 23ರಂದು ಎರಡು ದಿನಗಳ ಕಾಲ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆ ಸೋಂಕು ಹರಡುವಿಕೆ ನಿಯಂತ್ರಿಸಲು ಮೇ 24ರ ಬೆಳಗ್ಗೆ 6 ಗಂಟೆಯಿಂದ ಮೇ 30ರ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರಲಿದೆ. ಅಗತ್ಯ ವಸ್ತುಗಳ ಡೋರ್ ಡಿಲೆವರಿಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಿಳಿಸಿದ್ದಾರೆ.