ಭಟ್ಕಳ : ತಾಲೂಕಿನಲ್ಲಿ ಲಾಕ್‌ಡೌನ್ ಕೊಂಚ ಸಡಿಲಿಕೆ ಮಾಡಲಾಗಿದೆ. ನಾಳೆಯಿಂದ ಅಂಗಡಿಗಳನ್ನು ತೆರೆಯುವ ಅವಧಿಯಲ್ಲಿ ವಿಸ್ತರಣೆ ಮಾಡಲಾಗಿದೆ.
ಕಳೆದೊಂದು ವಾರದಿಂದ ತಾಲೂಕಿನ ಜನತೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆಲ್ಲ ಜಿಲ್ಲಾಡಳಿತ ಇಂದು ತೆರೆ ಎಳೆದಿದೆ. ನಾಳೆಯಿಂದ ತಾಲೂಕಿನಲ್ಲಿ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
ಸಡಿಲಿಕೆ ಆದೇಶವನ್ನು ಜಿಲ್ಲಾಧಿಕಾರಿಗಳು ಘೋಷಿಸಿದ ಬೆನ್ನಲ್ಲೇ ಉಪವಿಭಾಗಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ. ಇಷ್ಟು ದಿನ ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗಿದ್ದ ಸಮಯ ನಾಳೆಯಿಂದ 2 ತಾಸು ಹೆಚ್ಚುವರಿಯಾಗಿ ಸಡಲಿಕೆ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.