ಬಂಟ್ವಾಳ: ತಾಲೂಕಿನಲ್ಲಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಗಳು ಮಲೇರಿಯಾ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಿದವು.
ದ.ಕ. ಜಿಲ್ಲಾ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ -ಬಾಳ್ತಿಲ ಹಾಗೂ ನರಿಕೊಂಬು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮಲೇರಿಯಾ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಕೊರೊನಾವಷ್ಟೇ ಅಲ್ಲ, ಡೆಂಗ್ಯೂ, ಮಲೇರಿಯಾ ಹರಡುವ ಸಮಯ. ಹೀಗಾಗಿ ಜಾಗೃತಿ ವಹಿಸುವುದು ಅಗತ್ಯ ಎಂದು ಆರೋಗ್ಯ ಇಲಾಖೆ ನಿವೃತ್ತ ಅಧಿಕಾರಿ ಜಯರಾಮ ಪೂಜಾರಿ ಹೇಳಿದರು.
ಈ ವೇಳೆ ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕ ವೀರೇಶ್, ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧರ ಕರ್ಬೆಟ್ಟು, ತಾಲೂಕು ಪಂಚಾಯಿತಿ ಸದಸ್ಯೆ ಗಾಯತ್ರಿ ರವೀಂದ್ರ ಸಫಲ್, ವೀರಮಾರುತಿ ಯುವಕ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ , ಕಲ್ಲಡ್ಕ ಬಾಳ್ತಿಲ ಪ್ರಾ.ಆರೋಗ್ಯ ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಮರಿಯಾ ಕುಟ್ಟಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.