ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರದಿಂದ ತಮ್ಮೂರಿಗೆ ಬಸ್ ಬಿಡದಂತೆ ಮನಸೂರು ಗ್ರಾಮಸ್ಥರು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ತಾಲೂಕಿನ ಮನಸೂರ ಗ್ರಾಮಸ್ಥರು ಕೊರೊನಾದಿಂದ ಆತಂಕಗೊಂಡಿದ್ದು, ಧಾರವಾಡದಿಂದ ತಮ್ಮೂರಿಗೆ ಬಸ್ ಸಂಚಾರ ನಿಲ್ಲಿಸುವಂತೆ ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಮುಂಜಾನೆಯಿಂದ ಗ್ರಾಮಕ್ಕೆ ಬಂದ ಬಸ್ ಗಳನ್ನು ಗ್ರಾಮಸ್ಥರು ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿಯಿದೆ.