ಆನೇಕಲ್: ಬಂಡಾಪುರದ ಮಲಗುಂಡಿಯಲ್ಲಿ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದ ವ್ಯಕ್ತಿಗೂ ಕೊರೊನಾ ಇರುವುದು ದೃಢಪಟ್ಟಿದೆ ಎಂದು ತಾಲೂಕು ವೈದ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.
ತಾಲೂಕಿನ ಮಂಚನಹಳ್ಳಿ ಮೂಲದವರಾದ ವ್ಯಕ್ತಿ ಮಲದ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದರು. ಅವರ ಮರಣೋತ್ತರ ಪರೀಕ್ಷೆಗೂ ಮುನ್ನ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈಗ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಈ ಮೂಲಕ ತಾಲೂಕಿನಲ್ಲಿ ನಾಲ್ಕು ಕೊರೊನಾ ಪ್ರಕರಣಗಳು ದಾಖಲಾಗಿವೆ.