ಮಂಗಳೂರು: ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ಎಂಬವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ಕಾಯ್ದೆ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಧೀಶ ಬಿ.ಬಿ.ಜಕಾತಿ ವಜಾಗೊಳಿಸಿದ್ದಾರೆ.
ಪ್ರಕರಣದ ವಿವರ:
ಬಂಟ್ವಾಳ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡರವರಲ್ಲಿ 1.7 ಕೋಟಿ ರೂ.ನಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಹಿನ್ನೆಲೆಯಲ್ಲಿ, 2017 ಡಿ.12 ರಂದು ಆಗಿನ ಭ್ರಷ್ಟಾಚಾರ ನಿಗ್ರಹದಳದ ಡಿವೈಎಸ್‌ಪಿ ಸುಧೀರ್ ಹೆಗ್ಡೆ ಮತ್ತು ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ತಂಡವು ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಚಿನ ಆಸ್ತಿಗಳನ್ನು ಹೊಂದಿದ್ದಾರೆಂದು ಪ್ರಕರಣ ದಾಖಲಿಸಿ ಹಲವು ಸೊತ್ತುಗಳನ್ನು ವಶಕ್ಕೆ ಪಡೆದಿತ್ತು.
ಈ ಸಂದರ್ಭದಲ್ಲಿ ಬಂಧನ ಭೀತಿಯಿಂದ ಆರೋಪಿ ಜೋಸೆಫ್ ಡೇನಿಸ್ ಮಿರಾಂಡ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ವಿರೋಧಿ ಕಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲ, ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಆರೋಪಿಯ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು.
ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಬಿ. ಬಿ. ಜಕಾತಿ ಆರೋಪಿ ಜೋಸೆಫ್ ಡೇನಿಸ್ ಮಿರಾಂಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ದೊಡ್ಡ ಮೊತ್ತದ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ ಬಗ್ಗೆ ಆರೋಪವಿದ್ದು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಅಗತ್ಯವಿದ್ದಲ್ಲಿ ಬಂಧಿಸಬೇಕಾಗುವ ಸನ್ನಿವೇಶವನ್ನು ತಳ್ಳಿ ಹಾಕುವಂತಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಧೀಶ ಬಿ.ಬಿ. ಜಕಾತಿಯವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪರ ವಿಶೇಷ ಸರಕಾರಿ ಅಭಿಯೋಜಕ ಮತ್ತು ನ್ಯಾಯವಾದಿ ಕೆ. ಎಸ್. ಎನ್. ರಾಜೇಶ್ ವಾದಿಸಿದ್ದರು.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ: ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ - ಜೋಸೆಫ್ ಡೇನಿಸ್ ಮಿರಾಂಡ ಪ್ರಕರಣ
ಜೋಸೆಫ್ ಡೇನಿಸ್ ಮಿರಾಂಡರವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ಅರ್ಜಿಯನ್ನು ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ಕಾಯ್ದೆ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಧೀಶ ಬಿ.ಬಿ.ಜಕಾತಿ ವಜಾಗೊಳಿಸಿದ್ದಾರೆ.