ಬೆಳಗಾವಿ : ಕೃಷ್ಣಾ ನದಿ ನೀರು ಬಿಡುಗಡೆಯಲ್ಲಿ ಆಗುತ್ತಿರುವ ವಿಳಂಬ ನೀತಿ ಹಾಗೂ ನದಿ ನೀರು ಹಂಚಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರಿಂದ ಇಂದು ಬೆಳಗಾವಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಆದರೆ ಈ ಸಭೆಗೆ ಬೆಳಗಾವಿ ಸಾಹುಕಾರ್ ಮಾತ್ರ ಗೈರುಹಾಜರಾಗಿದ್ದಾರೆ.
ಬೆಳಗಾವಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಇಂದಿನ ಸಭೆಯಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ. ಆದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾತ್ರ ಸಭೆಯಿಂದ ದೂರ ಉಳಿದಿದ್ದಾರೆ.
ಪ್ರತಿ ವರ್ಷವೂ ಬರಗಾಲದಿಂದ ಕೃಷ್ಣಾ ನದಿ ಬತ್ತಿ ಹೋಗುತ್ತಿದೆ. ನದಿ ನೀರು ಹಂಚಿಕೆಯ ಕುರಿತು ಶಾಶ್ವತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಇಂದಿನ ಸಭೆ ಅತ್ಯಂತ ಮಹತ್ವ ಪಡೆದಿದೆ. ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇಂದಿನ ಸಭೆಯಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಜೊತೆ ಮುನಿಸಿಕೊಂಡಿರುವ ಹಿನ್ನೆಲೆ ರಮೇಶ್ ಜಾರಕಿಹೊಳಿ ಇಂದಿನ ಸಭೆಗೆ ಹಾಜರಾಗಿಲ್ಲ. ಸಚಿವ ಡಿಕೆಶಿ ಜೊತೆಗಿನ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ ಎಂದು ಹೇಳಲಾಗ್ತಿದೆ.