ETV Bharat / briefs

ಯಾದಗಿರಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರು ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮಕ್ಕೇ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

Yadgiri
Yadgiri
author img

By

Published : Jun 4, 2020, 10:37 PM IST

Updated : Jun 5, 2020, 11:53 AM IST

ಯಾದಗಿರಿ: ತಾಲೂಕಿನ ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.

ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿ ಜಲ ಮೂಲಗಳ ಪುನಶ್ಚೇತನಗೊಳಿಸಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಭಾಗಿತ್ವದಲ್ಲಿ ಅನಷ್ಠಾನಗೊಳಿಸುತ್ತಿರುವ ಅಂತರ್ಜಲ ಚೇತನ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಲಾಕ್‍ಡೌನ್ ಸಂಬಂಧ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿ ಗ್ರಾಮೀಣ ಪ್ರದೇಶದ ಬಡವರಿಗೆ ಉದ್ಯೋಗ ಕೊಡಲು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮನರೇಗಾ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ 122 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಸುಮಾರು 28 ಸಾವಿರ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಂತರ್ಜಲ ಹೆಚ್ಚಳಕ್ಕಾಗಿ ಶ್ರೀ ಶ್ರೀ ರವಿಶಂಕರ ಗುರೂಜಿಯವರ ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಅಂತರ್ಜಲ ಚೇತನ‌ ಕಾಮಗಾರಿಗಳನ್ನು ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರಾಜ್ಯದಲ್ಲಿ ಜೂ.3ರಂದು ಒಂದೇ ದಿನ 9.30 ಲಕ್ಷ ಜನ ಕೆಲಸ ಮಾಡಿದ್ದಾರೆ. ದೇಶದ ಛತ್ತಿಸಘಡ ಬಿಟ್ಟರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದರು.

ನಂತರ ಸಾಮಾಜಿಕ ಅರಣ್ಯ ಇಲಾಖೆಯ ಮುಂಗಡ ಗುಂಡಿ ತೋಡುವ ಕಾಮಗಾರಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಪರಿಶೀಲನೆ ಮಾಡಿದ ಸಚಿವರು, ಮನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿ ನಂತರ ಉದ್ಯೋಗ ಚೀಟಿಗಳನ್ನು ವಿತರಣೆ ಮಾಡಿದರು.

ಜಿಲ್ಲಾ ಸಂಪನ್ಮೂಲ ಕೇಂದ್ರ ಉದ್ಘಾಟನೆ:

ತಾಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿಸಿರುವ ನೂತನ ಜಿಲ್ಲಾ ಸಂಪನ್ಮೂಲ ಕೇಂದ್ರ ಕಟ್ಟಡವನ್ನು ಉದ್ಘಾಟನೆ ಮಾಡಿದರು.

ಈ ವೇಳೆ ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ, ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಾಗರಾಜ ಗಂಗೊಳ್ಳಿ, ರವೀಂದ್ರ ದೇಸಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Last Updated : Jun 5, 2020, 11:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.