ETV Bharat / briefs

ಕಲಬುರಗಿ ವಿಷನ್ 2050 ಸಮಿತಿ ರಚಿಸಲು ಡಿಸಿಗೆ ಸಚಿವ ಮುರುಗೇಶ್ ನಿರಾಣಿ ಸೂಚನೆ - Kalburgi DC VV Jyothsna

"ಕಲಬುರಗಿ ವಿಷನ್-2050”ನಲ್ಲಿ ‌ಆರೋಗ್ಯ, ಶಿಕ್ಷಣ, ಕೃಷಿ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ ಮುಂತಾದ ಕ್ಷೇತ್ರಗಳ 15 ಸಮಿತಿಗಳನ್ನು ರಚಿಸಬೇಕು. ಈ ಸಮಿತಿಗಳಲ್ಲಿ ಸ್ಥಳೀಯ ಶಾಸಕರು, ನಿವೃತ್ತಿ ಹೊಂದಿದವರು, ಆಯಾ ಕ್ಷೇತ್ರಗಳಲ್ಲಿ ಅನುಭವ - ಪರಿಣತಿ ಹೊಂದಿರುವವರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

Kalburgi Vision 2050
Kalburgi Vision 2050
author img

By

Published : Jun 9, 2021, 4:46 PM IST

ಬೆಂಗಳೂರು: ಹಿಂದುಳಿದ ಕಲಬುರಗಿ ಜಿಲ್ಲೆಯನ್ನು ಮುಂದಿನ 30 ವರ್ಷದೊಳಗೆ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಲು ಜಾರಿಗೆ ತರಲು ಉದ್ದೇಶಿಸಿರುವ "ಕಲಬುರಗಿ ವಿಷನ್ 2050" ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವಂತೆ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಈ ಸಂಬಂಧ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸಾ ಅವರಿಗೆ ಪತ್ರ ಬರೆದಿರುವ ನಿರಾಣಿ ಅವರು, ತಕ್ಷಣವೇ ಸಮಿತಿಗಳನ್ನು ರಚಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ "ಕಲಬುರಗಿ ವಿಷನ್-2050” ಎಂಬ ವಿನೂತನ ಯೋಜನೆ ಹಾಕಿಕೊಳ್ಳಲಾಗಿದ್ದು, ಇದು ಕೂಡಲೇ ಕಾರ್ಯಗತವಾಗಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

ಡಾ. ನಂಜುಂಡಪ್ಪ ವರದಿ ಪ್ರಕಾರ, ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಜಿಲ್ಲೆಯನ್ನು ಮುಂದಿನ 30 ವರ್ಷದೊಳಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸರ್ವಾಂಗೀಣ ಅಭಿವೃದ್ಧಿಪಡಿಸಬೇಕು. ಈ ಹಿನ್ನೆಲೆಯಲ್ಲಿ ‌ಸಮಿತಿ ರಚನೆಯಾದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

"ಕಲಬುರಗಿ ವಿಷನ್-2050”ನಲ್ಲಿ ‌ಆರೋಗ್ಯ, ಶಿಕ್ಷಣ, ಕೃಷಿ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ ಮುಂತಾದ ಕ್ಷೇತ್ರಗಳ 15 ಸಮಿತಿಗಳನ್ನು ರಚಿಸಬೇಕು. ಈ ಸಮಿತಿಗಳಲ್ಲಿ ಸ್ಥಳೀಯ ಶಾಸಕರು, ನಿವೃತ್ತಿ ಹೊಂದಿದವರು, ಆಯಾ ಕ್ಷೇತ್ರಗಳಲ್ಲಿ ಅನುಭವ - ಪರಿಣತಿ ಹೊಂದಿರುವವರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸಲಹೆ ಮಾಡಿದ್ದಾರೆ.

ಜೊತೆಗೆ ಜಿಲ್ಲಾ / ತಾಲೂಕು ಮಟ್ಟದ ‌ಆಯಾ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಆಯಾ ಸಮಿತಿಗೆ ಸದಸ್ಯ ಕಾರ್ಯದರ್ಶಿಗಳನ್ನಾಗಿ ಮಾಡಬೇಕು. ಈ ಎಲ್ಲ ಸಮಿತಿಯ ಅಧ್ಯಕ್ಷರುಗಳು ಪ್ರಧಾನ ಸಮಿತಿ ಸದಸ್ಯರಾಗಿರುತ್ತಾರೆ. ಪ್ರಧಾನ ಸಮಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಂತಾದವರು ಸದಸ್ಯರನ್ನಾಗಿ ಮಾಡುವಂತೆಯೂ ಸೂಚಿಸಿದ್ದಾರೆ.

ಎಲ್ಲಾ ಇಲಾಖೆಗಳಲ್ಲಿ ಸಮನ್ವಯತೆ ಸಾಧಿಸುವುದರ ಜೊತೆಗೆ ‌ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿ, ಜಿಲ್ಲೆಗೆ ಪೂರಕವಾಗಿ ಅಲ್ಪಾವಧಿ, ಮತ್ತು ದೀರ್ಘಾವಧಿ ಯೋಜನೆಗಳನ್ನು ರೂಪಿಸಿ‌ ಕಾಲಮಿತಿಯೊಳಗೆ ಅನುಷ್ಠಾನ ಮಾಡಬೇಕು ಎಂದು ತಿಳಿಸಿದ್ದಾರೆ. ಸಮಿತಿ ರಚನೆಯಾಗಿ ಜೂನ್ ತಿಂಗಳಲ್ಲಿ ಪೂರ್ವಭಾವಿ ಸಭೆ ನಡೆಸಬೇಕು. ಜುಲೈ ತಿಂಗಳ ಮೊದಲ ವಾರದಲ್ಲಿ ಕಲಬುರಗಿ ವಿಷನ್ 2050 ಮೊದಲ ಸಭೆ ನಡೆಸಲು ಪೂರ್ವ ಸಿದ್ಧತೆಯನ್ನು ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳ ಬಳಕೆ ಮಾಡಿಕೊಂಡು ಗುಡಿ, ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡಬೇಕು.ಯಾವುದೇ ಫಲಾಪೇಕ್ಷೆ ಬಯಸದ ಕಲಬುರಗಿ ಜಿಲ್ಲೆಯ ಬುದ್ಧಿಜೀವಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಸಚಿವ ನಿರಾಣಿ ಅವರು ಸಲಹೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.