ETV Bharat / briefs

ಮೇ 14 ರಿಂದ ಸಚಿವ ವಿ. ಸೋಮಣ್ಣ ಕೊಡಗು ಜಿಲ್ಲಾ ಪ್ರವಾಸ.. ಕೋವಿಡ್​ ಕುರಿತು ಸಭೆ

author img

By

Published : May 12, 2021, 3:30 PM IST

ಕೊಡಗು ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ನಡೆಸಲಿದ್ದಾರೆ.

minister somanna
ಸಚಿವ ಸೋಮಣ್ಣ

ಕೊಡಗು: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮೇ 14 ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಮೇ 14 ರಂದು ಸಂಜೆ 3 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಬಳಿಕ ಸಂಜೆ 4.30 ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 5.30 ಗಂಟೆಗೆ ಗಾಳಿಬೀಡು ಬಳಿಯ ನವೋದಯ ವಿದ್ಯಾಲಯದಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಮೇ 15 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲೂಕು ಆಸ್ಪತ್ರೆ ಹಾಗೂ ಆತ್ರೇಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಕುಟ್ಟ ಗ್ರಾಮದಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಹಾಗೆಯೇ ಚೆಕ್‍ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಮಧ್ಯಾಹ್ನ 3.30 ಗಂಟೆಗೆ ಗೋಣಿಕೊಪ್ಪದ ಲೋಪಮುದ್ರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಸಂಜೆ 4.15 ಗಂಟೆಗೆ ಪಾಲಿಬೆಟ್ಟದಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಮೇ 16 ರಂದು ಬೆಳಗ್ಗೆ 9.45 ಗಂಟೆಗೆ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 11 ಗಂಟೆಗೆ ಸೋಮವಾರಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.