ದಾವಣಗೆರೆ: ಶಾಸಕ ರೇಣುಕಾಚಾರ್ಯ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಹೊನ್ನಾಳಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ, ಕೊರೊನಾ ಸೋಂಕಿತರ ಆರೋಗ್ಯ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್ ಧರಿಸಿದ್ದ ಶಾಸಕ ರೇಣುಕಾಚಾರ್ಯ ಇಡೀ ಆಸ್ಪತ್ರೆಯನ್ನು ಸುತ್ತು ಹಾಕಿ ಸೋಂಕಿತರ ಯೋಗಕ್ಷೇಮ ವಿಚಾರಿಸಿ ಕುಂದು ಕೊರತೆಗಳಿದ್ದರೆ ಮಾಹಿತಿ ನೀಡಿ ಎಂದು ತಿಳಿಸಿದರು.
ಎರಡು ದಿನಗಳ ಹಿಂದೆ ಕೋವಿಡ್ನಿಂದ ಗುಣಮುಖರಾಗಿ ಬೆಂಗಳೂರಿನಿಂದ ಬಂದಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ, ಇದೀಗ ಮತ್ತೆ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿರುವುದು ಪ್ರಚಾರದ ಹುಚ್ಚೋ ಅಥವಾ ತಮ್ಮ ಕ್ಷೇತ್ರದ ಜನರ ಮೇಲಿನ ಪ್ರೀತಿಯೋ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಗನ್ಮ್ಯಾನ್ ರಮೇಶ್ ಕೋವಿಡ್ಗೆ ಬಲಿ