ಬೆಂಗಳೂರು: ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಹಾಗೂ ಅವರ ಪತ್ನಿ ಡಾ. ಸುಜಾತಾ ರಾಥೋಡ್ಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಅನಾರೋಗ್ಯ ಕಾಡಿದ ಹಿನ್ನೆಲೆ ತಪಾಸಣೆಗೆ ಒಳಗಾಗಿದ್ದಾಗ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಇಬ್ಬರೂ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ಕಳೆದ ಒಂದೆರಡು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಸ್ವಯಂ ತಪಾಸಣೆಗೆ ಒಳಗಾಗಿ ಹಾಗೂ ಕ್ವಾರಂಟೈನ್ ಆಗಿ ಎಂದು ಪ್ರಕಾಶ್ ರಾಥೋಡ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ ಮನವಿ ಮಾಡಿದ್ದಾರೆ. ಕಾಂಗ್ರೆಸ್ನ ಹಲವು ನಾಯಕರು ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.