ಬೆಂಗಳೂರು: ಇಲ್ಲಿನ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರನ್ನು ನೇಮಕ ಮಾಡಲಾಗಿದೆ.
ಶರವಣ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿ ಇಂದು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವುದೆಂಬ ವಿಶ್ವಾಸ ಹೊಂದಿದ್ದ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಲಭಿಸಿದೆ.