ETV Bharat / briefs

ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Chikkamaguru
Chikkamaguru
author img

By

Published : Jun 16, 2020, 4:36 AM IST

ಚಿಕ್ಕಮಗಳೂರು : ಕೊರೊನಾ ಸೋಂಕು ಮುಂದಿನ ದಿನಗಳಲ್ಲಿ ಉಲ್ಬಣಗೊಂಡು ಹೆಚ್ಚಿನ ಅನಾಹುತ ಆಗದಂತೆ ತಡೆಯಲು ಸಾರ್ವಜನಿಕರು ಸೇರಿದಂತೆ ಸರ್ಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಹಾಗೂ ಕೇಂದ್ರ ಕಾರ್ಯ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಕೋವಿಡ್-19 ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೀಗೆ ಮುಂದುವರೆದರೆ ಹೆಚ್ಚಿನ ಜನರು ಸೋಂಕಿಗೊಳಗಾಗಿ ಸಾವು-ನೋವುಗಳು ಆಗಲಿದೆ. ಇವುಗಳನ್ನು ತಡೆಯಲು ಜನಸಾಮಾನ್ಯರು ತಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದರೊಂದಿಗೆ, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಗಳನ್ನು ತಪ್ಪದೇ ಬಳಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ಯಾನಿಟೈಸರ್ ಬಳಸಬೇಕು ಎಂದರು.

ಸೋಂಕು ಹರಡದಂತೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಸೇರಿದಂತೆ ಇತರ ಇಲಾಖೆಗಳು ಹಗಲಿರುಳು ಶ್ರಮ ವಹಿಸಿದ್ದು, ಸೋಂಕನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಪ್ರಾಯೋಜಿತ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪ್ರತಿಶತ ನೂರರಷ್ಟು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಉದ್ಯೋಗ ನೀಡಬೇಕು. ಈ ಮೂಲಕ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶದಿಂದ ಅದಕ್ಕೆ ಹೆಚ್ಚು ಒತ್ತು ನೀಡಿ ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಶೌಚಾಲಯ ರಹಿತ ಕುಟುಂಬಗಳಿಗೆ ಶೌಚಾಲಯ ನಿರ್ಮಾಣವನ್ನು ಶೀಘ್ರದಲ್ಲಿ ಮಾಡಿಕೊಡಬೇಕು. ಶಾಲೆ, ಅಂಗನವಾಡಿಯಲ್ಲಿ ಹೆಚ್ಚುವರಿ ಶೌಚಾಲಯಗಳನ್ನು ಅಗತ್ಯಕ್ಕೆ ಅನುಗುಣವಾಗಿ ನಿರ್ಮಿಸಿಕೊಡಬೇಕು. ಆಶ್ರಯ ಮನೆ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಮರಳಿನ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.