ಮೈಸೂರು: ತಾಯಿ ಚಾಮುಂಡೇಶ್ವರಿ ನನ್ನ ಮೇಲೆ ಆಶೀರ್ವಾದ ಮಾಡುತ್ತಾಳೆ. ನನಗೆ ಗೆಲ್ಲುವ ವಿಶ್ವಾಸ ಇದೆ ಎಂದು ಕೊಡುಗು-ಮೈಸೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರತಾಪ ಸಿಂಹ ಹೇಳಿದರು.
ಮತಎಣಿಕೆ ಕೇಂದ್ರಕ್ಕೂ ಮುನ್ನ ಹೋಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರ ನಿಧಿ ಬಳಕೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅನುದಾನ ತಂದಿದ್ದೇನೆ. ಜನರು ಮತ್ತೊಮ್ಮೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ದಾವಣಗೆರೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ದಾವಣಗೆರೆ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ್, ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಜಿ.ಎಂ. ಸಿದ್ದೇಶ್ವರ್ ನಾಲ್ಕನೇ ಬಾರಿ ಗೆದ್ದು ದಾವಣಗೆರೆಯಲ್ಲಿ ಇತಿಹಾಸ ನಿರ್ಮಿಸುವ ವಿಶ್ವಾಸ ಇದೆ ಎಂದ ಅವರು ಹೇಳಿದ್ದಾರೆ.