ದೇಶದಲ್ಲಿ ಕೊರೊನಾ ಎರಡನೇ ಅಲೆಯ ಭೀಕರತೆಗೆ ಬಡವರು, ಶ್ರೀಮಂತರು, ಗಣ್ಯರು ಎನ್ನದೇ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆ, ಬೆಡ್ ಆಕ್ಸಿಜನ್ ಸಿಗದೇ ಪರದಾಡುತ್ತಿದ್ದಾರೆ. ಅನೇಕರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.
ಇದೀಗ ಕನ್ನಡ ಚಿತ್ರರಂಗದ ಮೇಷ್ಟ್ರು ಅಂತಾ ಕರೆಯಿಸಿಕೊಂಡಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕೊರೊನಾದಿಂದ ನಾಲ್ಕು ಮಂದಿ ಆಪ್ತರನ್ನು ಕಳೆದುಕೊಂಡಿದ್ದಾರೆ. ಕೊರೊನಾ ಭೀಕರತೆ ಬಗ್ಗೆ ನಾಗತಿಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಹಳ್ಳಿಗಳಾದರೂ ಸುರಕ್ಷಿತವಾಗಿವೆ ಅಂದುಕೊಂಡರೆ, ಹಳ್ಳಿಗಳಲ್ಲೂ ಸಾಲು ಸಾಲು ಹೆಣಗಳು ಬೀಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಅಸಹಾಯಕರಂತೆ ಕಾಣುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮ ತಲೆಮಾರು ಇಂಥ ಕರಾಳ ದಿನಗಳಿಗೆ ಸಾಕ್ಷಿಯಾದೀತು ಎಂದು ಯಾರೂ ಎಣಿಸಿರಲಿಲ್ಲ. ಶತಾಯ ಗತಾಯ ಹೋರಾಡಿ ಹಾಸಿಗೆ ಪಡೆದುಕೊಂಡರೆ ದಾಖಲಾಗುವ ಮೊದಲೇ ನಾಲ್ವರು ಮಾರ್ಗ ಮಧ್ಯದಲ್ಲಿ ಮೃತ್ಯು ಮಂಚವೇರಿದ್ದಾರೆ. ಕ್ಷೇಮ ಎಂದು ನಂಬಿದ್ದ ನನ್ನ ಹಳ್ಳಿಯಲ್ಲೂ ಸಾಲು ಸಾಲಾಗಿ ಹೆಣ ಬೀಳುತ್ತಿವೆ. ಎಲ್ಲರೂ ಅಸಹಾಯಕರಂತೆ ಕಾಣುತ್ತಿದ್ದೇವೆ ಅಂತಾ ಸೋಷಿಯಲ್ ಮೀಡಿಯಾದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಬೇಸರವನ್ನ ವ್ಯಕ್ತಪಡಿಸಿದ್ದಾರೆ.