ಬೀದರ್: ಇಲ್ಲಿನ ಈಶಾನ್ಯ ಸಾರಿಗೆ ಸಂಸ್ಥೆ ಬಸ್ ಡಿಪೋದ ಪೆಟ್ರೋಲ್ ಬಂಕ್ನಲ್ಲಿ ಬರೋಬ್ಬರಿ 5,000 ಲೀಟರ್ ಡೀಸೆಲ್ ಕಳವು ಮಾಡಿದ ಪ್ರಕರಣ ನಡೆದಿದ್ದು, ಕಳ್ಳರ ಪತ್ತೆಗೆ ಪೊಲೀಸರು ಬಲೆಬೀಸಿದ್ಧಾರೆ.
ಜಿಲ್ಲೆಯ ಭಾಲ್ಕಿ ಬಸ್ ಡಿಪೋದಲ್ಲಿ ತಡರಾತ್ರಿ ಡೀಸೆಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಹಾಯವಿಲ್ಲದೇ ಈ ಕೃತ್ಯ ನಡೆಸಲು ಸಾಧ್ಯವೇ ಇಲ್ಲ ಎಂಬ ಆರೋಪ ಕೇಳಿಬಂದಿದೆ. ಇನ್ನು ಭಾಲ್ಕಿ ನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಘಟನೆಯಿಂದ ಬೆಚ್ಚಿಬಿದ್ದ ಈಶಾನ್ಯ ಸಾರಿಗೆ ಸಂಸ್ಥೆ ಹಿರಿಯ ಅಧಿಕಾರಿಗಳು ಪ್ರಕರಣದ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಘಟಕದ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.