ಮುಂಬೈ: ಇಡೀ ಭಾರತ ದೇಶದ ಜನತೆ ಅತ್ಯಂತ ಕಾತರದಿಂದ ಕಾಯುತ್ತಿರುವ ಮಹಾಫಲಿತಾಂಶಕ್ಕೆ ಒಂದು ದಿನವಷ್ಟೇ ಬಾಕಿ ಇದ್ದು, ಮುಂಬೈ ಷೇರು ಮಾರುಕಟ್ಟೆ ಉತ್ತಮ ಆರಂಭ ಪಡೆದಿದೆ.
ಎಕ್ಸಿಟ್ ಪೋಲ್ ಬಳಿಕ ಉತ್ತಮ ವಹಿವಾಟು ನಡೆಸುತ್ತಿರುವ ಷೇರು ಮಾರುಕಟ್ಟೆ, ಹೂಡಿಕೆದಾರರ ಮೊಗದಲ್ಲಿ ಸಂತಸ ಮೂಡಿಸಿದೆ. ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಮೋದಿ ಪರವಾಗಿ ಭವಿಷ್ಯ ನುಡಿದಿದ್ದು ಷೇರು ಮಾರುಕಟ್ಟೆಯಲ್ಲಿನ ವಹಿವಾಟಿನ ಮೇಲೆ ಧನಾತ್ಮಕ ಪರಿಣಾಮ ಬೀರಿದೆ.
ಹೆಚ್ಚಿನ ಓದಿಗಾಗಿ:
ಸೋಲನ್ನು ಗೌರವಯುತವಾಗಿ ಸ್ವೀಕರಿಸಿ... ವಿಪಕ್ಷಗಳಿಗೆ ಕೇಂದ್ರ ಸಚಿವ ಸಲಹೆ
ಬುಧವಾರದ ಆರಂಭದ ವಹಿವಾಟಿನಲ್ಲಿ ಸೆನ್ಸೆಕ್ಸ್ 76.46 ಹಾಗೂ ನಿಫ್ಟಿ 15.80 ಅಂಕಗಳನ್ನು ಹೆಚ್ಚಿಸಿಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ಏರಿಕೆಯನ್ನೇ ಕಾಣುತ್ತಿರುವ ಷೇರು ಮಾರುಕಟ್ಟೆ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಯಾವ ರೀತಿ ಸ್ಪಂದಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ನಾಳಿನ ಮಹಾಫಲಿತಾಂಶದಲ್ಲಿ ಎನ್ಡಿಎ ಮೈತ್ರಿಕೂಟ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿದರೆ ಮಾರುಕಟ್ಟೆಯಲ್ಲಿ ಬಹುದೊಡ್ಡ ಬದಲಾವಣೆಯಾಗುವ ಸಾಧ್ಯತೆ ಕಡಿಮೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.