ಅಮರಾವತಿ: ಕರ್ನಾಟಕದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಇಂದು ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ಮೋಹನ್ ರೆಡ್ಡಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಲೋಕಸಭಾ ಚುನಾವಣೆ ಜತೆ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಹೊಸದಾಗಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಜಗನ್ ರೆಡ್ಡಿ ಅವರ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಹೂಗುಚ್ಚ ನೀಡಿ, ಅಭಿನಂದನೆ ಸಲ್ಲಿಸಿದ್ರು.
ಈ ವೇಳೆ ನೂತನ ಮುಖ್ಯಮಂತ್ರಿ ಹಾಗು ನಿಖಿಲ್ ಕುಮಾರಸ್ವಾಮಿ ಕೆಲಕಾಲ ಮಾತುಕತೆ ನಡೆಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಸೋಲು ಕಂಡಿದ್ದರು.