ಮಂಡ್ಯ: ಲೋಕಸಭಾ ಚುನಾವಣೆ ಮುಗಿದ ಬಳಿಕ ಸ್ತ್ರೀ ಶಕ್ತಿ ಸಾಲಮನ್ನಾ ಆಗುತ್ತಂತೆ. ಹೀಗಂತ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳುತ್ತಿದ್ದಾರೆ.
ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವ ನಿಖಿಲ್, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದರು. ರಾಜ್ಯಾದ್ಯಂತ ಎಲ್ಲಾ ಸ್ತ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘಗಳ ಸಾಲಮನ್ನಾ ಮಾಡಲಾಗುವುದು. ಜೊತೆಗೆ ಬಡ್ಡಿ ರಹಿತ ಸಾಲ ನೀಡಲಾಗುದು ಎಂದರು.
ಪ್ರಚಾರದ ವೇಳೆ ಭರಪೂರ ಅಶ್ವಾಸನೆ ನೀಡಿದ್ದು, ರಸ್ತೆ, ಚರಂಡಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸೋದಾಗಿ ಹೇಳಿದ್ದಾರೆ. ಪ್ರಚಾರದ ಭರಾಟೆಯಲ್ಲಿ ನಿಖಿಲ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ರಾ ಎಂಬ ಪ್ರಶ್ನೆ ಎದುರಾಳಿ ವಲಯದಲ್ಲಿ ಎದ್ದಿದೆ.