ರಾಯಚೂರು : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿತ್ತು. ಆದರೆ, ಇಂದು ಯಾವುದೇ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ.
ಜಿಲ್ಲೆಯಲ್ಲಿ ಈವರೆಗೆ 431 ಜನ ಸೋಂಕಿತರು ಪತ್ತೆಯಾಗಿದ್ದಾರೆ. 271 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 158 ಸೋಂಕಿತ ಪ್ರಕರಣ ಸಕ್ರಿಯವಾಗಿವೆ.
ನಿಗದಿತ ಐಸೋಲೋಷನ್ ವಾರ್ಡ್‌ನಲ್ಲಿ ಅವರಿಗೆಲ್ಲ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.