ETV Bharat / briefs

ಅಸ್ಸೋಂನಲ್ಲಿ ನಾಳೆಯೇ ಸಿಎಂ ಪ್ರಮಾಣವಚನ.. ನೂತನ ಮುಖ್ಯಮಂತ್ರಿ ಯಾರೆಂಬುದೇ ನಿಗೂಢ! - ರಾಜ್ಯ ಮುಖ್ಯ ಕಾರ್ಯದರ್ಶಿ ಜಿಷ್ಣು ಬರುವಾ

ಮೇ 2 ರಂದು ಅಸ್ಸೋಂನಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದಲ್ಲಿ ಈ ಬಾರಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ನಾಳೆ ಸಿಎಂ ಪ್ರಮಾಣವಚನವಿದ್ದು, ಮುಖ್ಯಮಂತ್ರಿ ಯಾರೆಂಬ ವಿಚಾರ ನಿಗೂಢವಾಗಿದೆ.

assam
assam
author img

By

Published : May 6, 2021, 7:00 PM IST

ಗುವಾಹಟಿ: ಅಸ್ಸೋಂ ಮುಖ್ಯಮಂತ್ರಿ ಯಾರು ಎಂಬ ಅನಿಶ್ಚಿತತೆಯ ಮಧ್ಯೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜಭವನಕ್ಕೆ ಪತ್ರವೊಂದನ್ನು ಕಳುಹಿಸಿದ್ದಾರೆ. ನಾಳೆ(ಶುಕ್ರವಾರ) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ರಾಜ್ಯ ಮುಖ್ಯ ಕಾರ್ಯದರ್ಶಿ ಜಿಷ್ಣು ಬರುವಾ ಅವರು ರಾಜಭವನಕ್ಕೆ ಪತ್ರವೊಂದನ್ನು ಕಳುಹಿಸಿದ್ದು, ಶುಕ್ರವಾರ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಡೆಸಲು ರಾಜ್ಯವು ಸಿದ್ಧತೆ ನಡೆಸುತ್ತಿರುವುದು ಖಚಿತವಾಗಿದೆ ಎಂದು ದಿಸ್ಪುರದ ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿ ನಾಲ್ಕು ದಿನಗಳು ಕಳೆದರೂ, ಭಾರತೀಯ ಜನತಾ ಪಕ್ಷ (ಬಿಜೆಪಿ) ಇನ್ನೂ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಪ್ರಕಟಿಸಿಲ್ಲ.

ಮೇ 2 ರಂದು ಅಸ್ಸೋಂನಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದಲ್ಲಿ ಈ ಬಾರಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಮೈತ್ರಿ ಪಾಲುದಾರರಲ್ಲಿ ಕೆಲವು ಶಾಸಕರು ಹಿಂದಿನ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರನ್ನು ಉಳಿಸಿಕೊಳ್ಳಬೇಕು ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಹಿಂದಿನ ರಾಜ್ಯ ಆರೋಗ್ಯ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಉನ್ನತ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಪಕ್ಷದ ಸಂಸದೀಯ ಮಂಡಳಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ಕೇಂದ್ರ ನಾಯಕತ್ವ ಸಮರ್ಥಿಸಿಕೊಂಡಿದೆ. ಆದರೆ ಸಂಸದೀಯ ಮಂಡಳಿ ಈವರೆಗೂ ಸಭೆ ನಡೆಸಿಲ್ಲ ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.