ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಿನ್ನೆ ಅಮಿತ್ ಶಾ ರೋಡ್ ಶೋ ನಡೆಸುತ್ತಿದ್ದ ವೇಳೆ ನಡೆದ ಹಿಂಸಾಚಾರ ರಾಜಕೀಯ ಬಣ್ಣ ಪಡೆದುಕೊಡಿದ್ದು, ಇದೀಗ ಎಚ್ಚೆತ್ತುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ಪ್ರಚಾರ ರದ್ಧುಗೊಳಿಸಿ ಆದೇಶ ಹೊರಡಿಸಿದೆ. ನಾಳೆಯಿಂದಲೇ ಈ ಆದೇಶ ಜಾರಿಬರಲಿದೆ.
-
Election Commission: This is probably the first time that ECI has invoked Article 324 in this manner but it may not be last in cases of repetition of lawlessness and violence which vitiate the conduct of polls in a peaceful manner. pic.twitter.com/j8oG4cwP6V
— ANI (@ANI) May 15, 2019 " class="align-text-top noRightClick twitterSection" data="
">Election Commission: This is probably the first time that ECI has invoked Article 324 in this manner but it may not be last in cases of repetition of lawlessness and violence which vitiate the conduct of polls in a peaceful manner. pic.twitter.com/j8oG4cwP6V
— ANI (@ANI) May 15, 2019Election Commission: This is probably the first time that ECI has invoked Article 324 in this manner but it may not be last in cases of repetition of lawlessness and violence which vitiate the conduct of polls in a peaceful manner. pic.twitter.com/j8oG4cwP6V
— ANI (@ANI) May 15, 2019
ನಿನ್ನೆ ಅಮಿತ್ ಶಾ ರೋಡ್ ಶೋ ನಡೆಸುತ್ತಿದ್ದ ವೇಳೆ ಟಿಎಂಸಿ-ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದರು. ಈ ವೇಳೆ ಈಶ್ವರಚಂದ್ರ ವಿದ್ಯಾಸಾಗರ್ ಪ್ರತಿಮೆ ಕೂಡ ಧ್ವಂಸಗೊಳಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪಕ್ಷಗಳು ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಇದೀಗ ಚುನಾವಣಾ ಆಯೋಗ ಕೊನೆಯ ಹಂತದಲ್ಲಿ ನಡೆಯುವ 9ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ರದ್ಧುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಚುನಾವಣಾಧಿಕಾರಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ತಕ್ಷಣ ಅದನ್ನ ಸರಿದಾರಿಗೆ ತರುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ 9 ಸಂಸಧೀಯ ಲೋಕಸಭಾ ಕ್ಷೇತ್ರಗಳಿಗೆ ಮೇ 19ರಂದು ವೋಟಿಂಗ್ ನಡೆಯಲಿದೆ.
ಇನ್ನು ನಿನ್ನೆ ಅಮಿತ್ ಶಾ ರೋಡ್ ಶೋ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ನಿರ್ಮಲಾ ಸೀತಾರಾಮನ್,ಪ್ರಕಾಶ್ ಜಾವ್ಡೇಕರ್,ವಿಜಯ್ ಗೋಯಲ್ ಸೇರಿದಂತೆ ಅನೇಕರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.