ವಿಜಯಪುರ: ಕೊರೊನಾ ಭೀತಿ ಜಿಲ್ಲೆಯಲ್ಲಿ ಹೆಚ್ಚಿದ್ದರೂ ಸಹ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಹೂವು ಖರೀದಿಯಲ್ಲಿ ತೊಡಗಿದ್ದ ದೃಶ್ಯ ನಗರದಲ್ಲಿ ಕಂಡುಬಂತು.
ನಗರದ ಎಲ್‌ಬಿಎಸ್ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಮರೆತ ಜನರು ಮಣ್ಣೆತ್ತಿನ ಅಮಾವಾಸ್ಯೆ ಹಬ್ಬ ಆಚರಣೆಗಾಗಿ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದಿದ್ದರು.
ಇನ್ನೂ ಹೂವು ಕೊಳ್ಳಲು ಬಂದ ಕೆಲವರು ಮಾಸ್ಕ್ ಧರಿಸದೆ ಮಾರುಕಟ್ಟೆಯಲ್ಲಿ ಓಡಾಡುತ್ತಿರುವ ದೃಶ್ಯ ಸಮಾನ್ಯವಾಗಿತ್ತು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರು ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಇತ್ತ ಜಿಲ್ಲಾಡಳಿತ ಸಂಬಂಧವಿಲ್ಲದಂತೆ ಸುಮ್ಮನಿದೆ.
ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ ವಲಸೆ ಕಾರ್ಮಿಕರಿಂದ ಸೋಂಕಿತರ ಸಂಖ್ಯೆ 230 ರ ಗಡಿ ದಾಟಿದ್ದರೂ ಸಾರ್ವಜನಿಕರು ಡೋಂಟ್ ಕೇರ್ ಅಂತಿದಾರೆ.
ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ : ವಿಜಯಪುರ ಜನರಿಗಿಲ್ಲ ಕೊರೊನಾ ಭಯ
ಮಣ್ಣೆತ್ತಿನ ಅಮವಾಸ್ಯೆ ಆಚರಣೆಯಲ್ಲಿ ಮಗ್ನರಾಗಿರುವ ವಿಜಯಪುರ ಜನರು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 230 ಇದೆ ಎಂಬುವದನ್ನು ಮರೆತು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ನಿರ್ಲಕ್ಷಿಸಿದ್ದಾರೆ.