ನವದೆಹಲಿ: ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲು ಹಾಗೂ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಉದ್ಭವವಾಗಿರುವ ಗೊಂದಲದಿಂದಾಗಿ, ಪಕ್ಷದ ಮುಖಂಡರು ಯಾವುದೇ ಕಾರಣಕ್ಕೂ ಮಾಧ್ಯಮಗಳ ಸಂದರ್ಶನಗಳಲ್ಲಿ ಭಾಗಿಯಾಗದಂತೆ ಕಾಂಗ್ರೆಸ್ ಖಡಕ್ ಸೂಚನೆ ನೀಡಿದೆ.
ಮುಂದಿನ ಒಂದು ತಿಂಗಳ ಕಾಲ ಯಾವುದೇ ಸುದ್ದಿ ವಾಹಿನಿಗಳ ಸಂದರ್ಶನದಲ್ಲಿ ಭಾಗಿಯಾಗದಂತೆ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲ್ ಮಾಹಿತಿ ನೀಡಿ , ಟ್ವಿಟ್ ಮಾಡಿದ್ದಾರೆ.
-
.@INCIndia has decided to not send spokespersons on television debates for a month.
— Randeep Singh Surjewala (@rssurjewala) May 30, 2019 " class="align-text-top noRightClick twitterSection" data="
All media channels/editors are requested to not place Congress representatives on their shows.
">.@INCIndia has decided to not send spokespersons on television debates for a month.
— Randeep Singh Surjewala (@rssurjewala) May 30, 2019
All media channels/editors are requested to not place Congress representatives on their shows..@INCIndia has decided to not send spokespersons on television debates for a month.
— Randeep Singh Surjewala (@rssurjewala) May 30, 2019
All media channels/editors are requested to not place Congress representatives on their shows.
ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಾಣುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮೇಲಿಂದ ಮೇಲೆ ಸಭೆ ಕೂಡ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಪ್ರತಿನಿಧಿಗಳು ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ತಡೆಯಲು ಈ ಕ್ರಮಕ್ಕೆ ಮುಂದಾಗಿದೆ.
ಇದರ ಜತೆಗೆ ಕಾಂಗ್ರೆಸ್ ಪ್ರತಿನಿಧಿಗಳನ್ನು ತಮ್ಮ ಸಂದರ್ಶನ ಅಥವಾ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಬಳಕೆ ಮಾಡಿಕೊಳ್ಳದಂತೆ ಸುದ್ದಿ ಮಾಧ್ಯಮಗಳಿಗೂ ಮನವಿ ಮಾಡಿಕೊಳ್ಳುವುದಾಗಿ ಸುರ್ಜೇವಾಲ ತಿಳಿಸಿದ್ದಾರೆ.