ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಸಾ.ರಾ.ಮಹೇಶ್ ಶಾಸಕರೊಬ್ಬರ ಹೇಳಿಕೆಗೆ ತೀರುಗೇಟು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲು ಆಗಮಿಸಿದ ಸಚಿವರು, ನಿನ್ನೆ ಶಾಸಕರೊಬ್ಬರು ಇನ್ನು ನಾಲ್ಕು ತಿಂಗಳಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಮೈತ್ರಿ ಸರ್ಕಾರದಲ್ಲಿ 5 ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಎಂದು ಹೈಕಮಾಂಡ್ ಹೇಳಿದೆ. ಈ ರೀತಿ ಹೇಳಿಕೆಗಳನ್ನ ನೀಡಿ ಗೊಂದಲ ಸೃಷ್ಟಿಸಬಾರದು ಎಂದು ಸಚಿವ ಸಾ.ರಾ.ಮಹೇಶ್ ಕಿಡಿ ಕಾರಿದ್ದಾರೆ.