ಉಜ್ಜಯಿನಿ (ಮಧ್ಯ ಪ್ರದೇಶ): ಕೋವಿಡ್ -19 ವಿರುದ್ಧ ಶೇಕಡಾ 100ರಷ್ಟು ಲಸಿಕೆ ಹಾಕುವ ಗುರಿ ಸಾಧಿಸುವ ಹಿನ್ನೆಲೆ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲಾಡಳಿತವು ವ್ಯಾಕ್ಸಿನ್ ಪಡೆಯದಿದ್ದರೆ ಮುಂದಿನ ತಿಂಗಳಿನಿಂದ ಸರ್ಕಾರಿ ನೌಕರರಿಗೆ ಸಂಬಳ ಸಿಗುವುದಿಲ್ಲ ಎಂದು ಆದೇಶ ಹೊರಡಿಸಿದೆ.
ಈ ಕುರಿತು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಮಂಗಳವಾರ ಆದೇಶ ಹೊರಡಿಸಿದ್ದು, ಜುಲೈ 31ರೊಳಗೆ ಲಸಿಕೆ ಪಡೆಯಲು ವಿಫಲವಾದರೆ ಸರ್ಕಾರಿ ನೌಕರರ ವೇತನವನ್ನು ವಿತರಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ನೀಡಿದ ನಂತರವೇ ಜುಲೈ ನೌಕರರ ವೇತನ ವಿತರಿಸಲಾಗುವುದು ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಗುರಿಯನ್ನು ಸಾಧಿಸಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈ ದಿಕ್ಕಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ" ಎಂದು ಜಿಲ್ಲಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದರು.