ಬಳ್ಳಾರಿ : ಕೋವಿಡ್ನಿಂದ ಮೃತರಾದವರ ಅಂತ್ಯಸಂಸ್ಕಾರ ಸಂದರ್ಭದಲ್ಲಿ ಅಡಚಣೆ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ ಜರುಗಿಸುವ ನಿಟ್ಟಿನಲ್ಲಿ ನಗರದ ಸಿಟಿಎಸ್ ವಾರ್ಡ್ ಸಂ.06, ಬ್ಲಾಕ್ ನಂ.05ರ ಟೌನ್ ಸರ್ವೆ ಸಂ.673/4 ವಿಸ್ತೀರ್ಣ 2-08 ಎಕರೆಯಲ್ಲಿ ಹಿಂದೂ ಸ್ಮಶಾನದಲ್ಲಿ ಮೃತ ಸೋಂಕಿತ ಹಿಂದೂ ಜನಾಂಗದವರ ಅಂತ್ಯಸಂಸ್ಕಾರ ನಡೆಸಲು ಬಿಡದ ಹಾಗೂ ಈ ನಿಟ್ಟಿನಲ್ಲಿ ಅಡಚಣೆ ಮಾಡಿದವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಥವಾ ಅವರಿಂದ ನಿಯುಕ್ತಿಗೊಂಡ ಯಾವುದೇ ಪೊಲೀಸ್ ಅಧಿಕಾರಿಯು ಐಪಿಸಿ 1921ರ ಕಲಂ 188, ಐಪಿಸಿ ಕಲಂ 269 ಹಾಗೂ 270 ಅಡಿಯಲ್ಲಿ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕ್ರಿಯೆ ಸಮಯದಲ್ಲಿ ಅಧಿಕೃತ ಸಿಬ್ಬಂದಿ ಹೊರತುಪಡಿಸಿ ಬೇರೆಯವರ ಪ್ರವೇಶವನ್ನು ಸಹ ನಿರ್ಬಂಧಿಸಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕೋವಿಡ್ನಿಂದ ಮೃತರಾದವರ ಅಂತ್ಯಸಂಸ್ಕಾರಕ್ಕೆ ಆಡಚಣೆ ಮಾಡಿದರೆ ಕಾನೂನು ಕ್ರಮ
ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಡಚಣೆಯನ್ನುಂಟು ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.