ಚನ್ನರಾಯಪಟ್ಟಣ: ಡಯಾಬಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತ ವಾಸವಿರುವ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ಚನ್ನರಾಯಪಟ್ಟಣ ಬಾಗೂರು ರಸ್ತೆಯ ಐಯತ್ ಮಾಲ್ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಆ ರಸ್ತೆ ಮತ್ತು ಸೋಂಕಿತನ ಮನೆಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಅವರ ಕುಟುಂಬ ಸದಸ್ಯರನ್ನು ಕ್ವಾರಂಟೈನ್ ಗೆ ಒಳಪಡಿಸಿ, ಗಂಟಲು ದ್ರವ ಸಂಗ್ರಹಿಸಲಾಗಿದೆ.
ಮಧುಮೇಹ ಕಾಯಿಲೆ ತಪಾಸಣೆ ಮಾಡಿಸಿಕೊಳ್ಳಲು ಇಲ್ಲಿನ ಆಸ್ಪತ್ರೆಯೊಂದಕ್ಕೆ ಹೋಗಿದ್ದರು. ಜೊತೆಗೆ ಕೊರೊನಾ ಪರೀಕ್ಷೆಯನ್ನೂ ಮಾಡಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಈತ ಮೂರು ತಿಂಗಳ ಹಿಂದೆ ಬೆಂಗಳೂರಿನಿಂದ ಇಲ್ಲಿಗೆ ಬಂದಿದ್ದ.