ETV Bharat / briefs

ತುಮಕೂರು ಜಿಲ್ಲೆಯಲ್ಲಿ ಕೋವಿಡ್ ನಿಂದ ಓರ್ವ ಗುಣಮುಖ

author img

By

Published : Jun 15, 2020, 10:26 PM IST

ಕಲ್ಪತರುನಾಡು ತುಮಕೂರು ಜಿಲ್ಲೆಯಲ್ಲಿಂದು ಓರ್ವ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

One Corona patient cured in tumkuru district

ತುಮಕೂರು: ಜಿಲ್ಲೆಯಲ್ಲಿ ಇಂದು 11 ಮಂದಿ ಸೋಂಕಿತರ ಪೈಕಿ ಓರ್ವ ಗುಣಮುಖನಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ 41 ಮಂದಿಯಲ್ಲಿ ಸೋಂಕು ಕಂಡುಬಂದಿದೆ. ಅದರಲ್ಲಿ 29 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ 10 ಮಂದಿ ಜಿಲ್ಲಾ ಕೋವಿಡ್19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

746 ಮಂದಿ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು 45 ಮಂದಿಯನ್ನು ಕೊರೊನಾ ಶಂಕಿತರೆಂದು ಗುರುತಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದುವರೆಗೂ 12,298 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು ಅದರಲ್ಲಿ 11,607 ರಲ್ಲಿ ನೆಗೆಟಿವ್ ಕಂಡುಬಂದಿದೆ. 576 ಮಂದಿಯ ಸ್ಯಾಂಪಲ್ ಗಳ ವರದಿಯನ್ನು ತಿರಸ್ಕರಿಸಿ ಪುನಃ ಪರೀಕ್ಷೆಗೆ ಕಳುಹಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.