ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೊರಡಿಸಿದೆ.
ಸಿದ್ದರಾಮಯ್ಯ ಆರಾಮವಾಗಿದ್ದು, ಚೈತನ್ಯಭರಿತರಾಗಿದ್ದಾರೆ. ಹಾಗೆಯೇ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರ ತಂಡ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಲಾಗಿದೆ.
ಸಿದ್ದರಾಮಯ್ಯರಿಗೆ ಕೊರೊನಾ ಪಾಸಿಟಿವ್ ಬಂದು ಮೂರು ದಿನಗಳಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದಾಗ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದೀಗ ಜ್ವರದ ಪ್ರಮಾಣವೂ ಕಡಿಮೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.