ಶಿವಮೊಗ್ಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ಬೃಹತ್ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಮಹಾದಾಯಿ ವಿವಾದ: ಬಿಗಿ ಬಂದೋಬಸ್ತ್ ಮಧ್ಯೆ ಜಂಟಿ ಪರಿಶೀಲನೆ, ಮಾಧ್ಯಮಗಳಿಗೆ ನಿರ್ಬಂಧ
ಕಾರ್ಯಕ್ರಮಕ್ಕೆ ನಗರದ ಸೈನ್ಸ್ ಮೈದಾನದಲ್ಲಿ ವೇದಿಕೆ ಸಿದ್ಧಗೊಂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಸೇರಿದಂತೆ ಅನೇಕ ಪ್ರಗತಿಪರ, ದಲಿತಪರ ಸಂಘಟನೆಗಳು ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಹಾಗು ಜೆಡಿಯು ಪಕ್ಷಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ.