ನವದೆಹಲಿ: ವಿದೇಶ ಪ್ರವಾಸಕ್ಕೆ ಸುಪ್ರೀಂಕೋರ್ಟ್ನಲ್ಲಿ ಇರಿಸಲಾಗಿದ್ದ ಠೇವಣಿಯ ವಾಪಾಸಾತಿಗೆ ಕಾರ್ತಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಅರ್ಜಿ ಕೈಗೆತ್ತಿಕೊಂಡ ಸುಪ್ರೀಂನ ರಜಾವಧಿಯ ಪೀಠ, ನೀವು ನಿಮ್ಮ ಕ್ಷೇತ್ರದ ಬಗ್ಗೆ ಗಮನಹರಿಸಿ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ಜಸ್ಟೀಸ್ ಅನಿರುದ್ಧ ಬೋಸ್ ನೇತೃತ್ವದ ಪೀಠ ಚಿದು ಪುತ್ರನ ಅರ್ಜಿ ವಿಚಾರಣೆ ನಡೆಸಿದೆ.
ಹಲವಾರು ಹಣಕಾಸು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಕಾರ್ತಿ ಚಿದಂಬರಂ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐನಿಂದ ವಿಚಾರಣೆಗೆ ಒಳಗಾಗಿದ್ದಾರೆ.