ಕೋಲ್ಕತಾ (ಪಶ್ಚಿಮ ಬಂಗಾಳ): ಮಮತಾ ಬ್ಯಾನರ್ಜಿ ಸರ್ಕಾರದ ಮಂತ್ರಿಗಳಿಗೆ ಪ್ರಮಾಣ ವಚನ ಭೋದಿಸಿದ ಕೆಲವೇ ಕ್ಷಣಗಳಲ್ಲಿ, ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಅವರು ಸೋಮವಾರ ರಾಜ್ಯದಲ್ಲಿ ಚುನಾವಣಾ ಹಿಂಸಾಚಾರದಿಂದ ಉದ್ಭವಿಸಿರುವ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಹಾಗೆ ಶೀಘ್ರದಲ್ಲೇ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಧಂಖರ್, ಫಲಿತಾಂಶ ನಂತರ ನಡೆದ ಹಿಂಸಾಚಾರದಿಂದ ಉದ್ಭವಿಸಿದ ಪರಿಸ್ಥಿತಿ ಆತಂಕಕಾರಿ. ನಾನು ರಾಜ್ಯದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ ಎಂದು ಒತ್ತಿ ಹೇಳಿದ್ದಾರೆ.
ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮೊದಲು ಅಗತ್ಯ ವ್ಯವಸ್ಥೆಗಳಿಗಾಗಿ ಅವರು ಮಾಡಿದ ಮನವಿಗೆ ರಾಜ್ಯ ಆಡಳಿತ ಇನ್ನೂ ಸ್ಪಂದಿಸಿಲ್ಲ ಎಂದು ಹೇಳಿರುವ ಅವರು, ನಿಮ್ಮ ಮತವು ನಿಮ್ಮ ಸಾವಿಗೆ ಅಥವಾ ಆಸ್ತಿ ನಾಶಕ್ಕೆ ಕಾರಣವಾದರೆ ಅದು ಪ್ರಜಾಪ್ರಭುತ್ವದ ಅಂತ್ಯವನ್ನು ಸೂಚಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಓದಿಗೆ: ಇಂದಿನಿಂದ 14 ದಿನ ಕರ್ನಾಟಕ ಕಂಪ್ಲೀಟ್ ಲಾಕ್.. ಜಿಲ್ಲಾ ಗಡಿಗಳು ಬಂದ್.. ಹೀಗಿತ್ತು ಮೊದಲ ದಿನದ ಸ್ಥಿತಿಗತಿ
ಮೇ 2 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಬಂಗಾಳದ ಹಲವಾರು ಸ್ಥಳಗಳಲ್ಲಿ ಘರ್ಷಣೆಗಳು ನಡೆದಿದ್ದವು. ಹಾಗೆ ಈ ಸಂಬಂಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ ಮತದಾನದ ನಂತರದ ಹಿಂಸಾಚಾರದಲ್ಲಿ ಕನಿಷ್ಠ 16 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.