ನವದೆಹಲಿ: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಉಂಟಾಗಿರುವ ಫಣಿ ಚಂಡಮಾರುತದ ತೀವ್ರತೆ ಹೆಚ್ಚಾಗಿದೆ.
ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ ಫಣಿ ಅಬ್ಬರ ಮೇ 1ರವರೆಗೆ ಹೆಚ್ಚಾಗಿರಲಿದ್ದು, ಆ ಬಳಿಕ ತೀವ್ರತೆ ಕಳೆದುಕೊಳ್ಳಲಿದೆ.
ಫಣಿ ಚಂಡಮಾರುತ ಪ್ರಮುಖವಾಗಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ ಕೇರಳ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಪರಿಣಾಮ ಬೀರಲಿದೆ.
ಪ್ರಸ್ತುತ ಚೆನ್ನೈನ ಆಗ್ನೇಯ ಭಾಗದಲ್ಲಿ ಫಣಿ ಚಂಡಮಾರುತ ಇದ್ದು 50ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ಆಂಧ್ರದ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಆದೇಶಿಸಲಾಗಿದೆ.
ಚಂಡಮಾರುತದ ಪರಿಣಾಮ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.