ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಸರಣಿ ಸಭೆ ನಡೆಸಲಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಆಂತರಿಕ ಸಭೆಯಲ್ಲಿ ಕೋವಿಡ್-19 ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ. ಆ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಾಗುವುದು.
ಮಧ್ಯಾಹ್ನ 12:30 ಕ್ಕೆ ದೇಶದ ಪ್ರಮುಖ ಆಮ್ಲಜನಕ ತಯಾರಕ ಕಂಪನಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ನಡೆಸುವ ಸಲುವಾಗಿ ಪ್ರಧಾನಿ ಪಶ್ಚಿಮ ಬಂಗಾಳದ ಚುನಾವಣಾ ರ‍್ಯಾಲಿಯನ್ನು ರದ್ದುಗೊಳಿಸಿದ್ದಾರೆ. ಬಂಗಾಳದ ಮತದಾರರನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಲಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಶೀಘ್ರಗತಿಯಲ್ಲಿ ಏರುತ್ತಿರುವುದರಿಂದ, ಪರಿಸ್ಥಿತಿಯನ್ನು ಪರಿಶೀಲಿಸಲು ಮೋದಿ ನಿಯಮಿತ ಸಭೆಗಳ ಅಧ್ಯಕ್ಷತೆ ವಹಿಸುತ್ತಿದ್ದಾರೆ. ಕಳೆದ ಮಂಗಳವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದರು.