ಹುಬ್ಬಳ್ಳಿ: ಕೆಲ ದಿನಗಳ ಹಿಂದೆ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರವಾಗಿ ಕೊಲೆಗೈದ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕುಸುಗಲ್ ಗ್ರಾಮದ ಹೊರವಲಯದಲ್ಲಿ ಅದೇ ಗ್ರಾಮದ ರೈಮನ್ ಸಾಬ್ ಅಮಟಕ್ಕನವರ (34) ಎಂಬ ಯುವಕನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಪ್ರಕಾಶ ಗುಡ್ಡನವರ (36), ಶರೀಫ್ ನದಾಫ್ (30) ಎಂಬುವವರನ್ನು ಬಂಧಿಸಿದ್ದಾರೆ.
ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದ್ದೇವೆ ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.